ಅತ್ಯಾಚಾರ ಆರೋಪಿಗೆ ಸಾರ್ವಜನಿಕವಾಗಿ ಚಪ್ಪಲಿ ಏಟು ನೀಡಿದ ತೃಪ್ತಿ ದೇಸಾಯಿ

Webdunia
ಗುರುವಾರ, 28 ಜುಲೈ 2016 (16:13 IST)
ಸಾಮಾಜಿಕ ಕಾರ್ಯಕರ್ತೆ,  ಭೂಮಾತಾ ಬ್ರಿಗೇಡ್‍ನ ತೃಪ್ತಿ ದೇಸಾಯಿ ಅತ್ಯಾಚಾರ ಆರೋಪಿಗೆ ಸಾರ್ವಜನಿಕವಾಗಿ ಥಳಿಸುವುದರ ಮೂಲಕ ಸುದ್ದಿಯಲ್ಲಿದ್ದಾರೆ. ಈ ದೃಶ್ಯಾವಳಿ ಈಗ  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಹರಿದಾಡುತ್ತಿದೆ.


ಪುಣೆ ಸಮೀಪದ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಯುವತಿಗೆ ಮದುವೆಯಾಗುವುದಾಗಿ ಹೇಳಿ ವಂಚಿಸಿರುವ ಆರೋಪ ಹೊತ್ತಿರುವ 25 ವರ್ಷದ ಯುವಕನಿಗೆ ದೇಸಾಯಿ ಸಾರ್ವಜನಿಕವಾಗಿ ಚಪ್ಪಲಿ ಏಟು ನೀಡಿದ್ದಾರೆ.  ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿರುವ ದೇಸಾಯಿ ತಾವೇ ಮೊದಲು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಭೂಮಾತಾ ಬ್ರಿಗೇಡ್‌ನ ಇನ್ನೊಬ್ಬ ಸದಸ್ಯೆ ಅವರಿಗೆ ಸಾಥ್ ನೀಡಿದ್ದು  ಘಟನೆ ನಡೆಯುವಾಗ ಸಾರ್ವಜನಿಕರು ಸುತ್ತುವರೆದು ವೀಕ್ಷಿಸಿದ್ದಾರೆ.

ಆರೋಪಿ ಯುವಕನನ್ನು ಶ್ರೀಕಾಂತ್ ಲೋಂಧೆ ಎಂದು ಗುರುತಿಸಲಾಗಿದ್ದು ಆತನ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ.

ಆತ 24 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದ. ಆಕೆ ಗರ್ಭಿಣಿಯಾದಾಗ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಡ ಹೇರಿದ್ದ. ಆತನ ತಂದೆಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೆ. ಆದರೆ ಅವರು ಹಣ ನೀಡಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದರು. ಆತನಿಗೆ ತಕ್ಕ ಪಾಠ ಕಲಿಸಲು ಈ ಕೃತ್ಯವೆಸಗಿರುವುದಾಗಿ ಎಂದು ದೇಸಾಯಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮೋದಿ ವಿದೇಶಕ್ಕೆ ಹೋಗಲ್ವಾ, ರಾಹುಲ್ ಹೋದ್ರೆ ತಪ್ಪೇನು ಎಂದ ಮಲ್ಲಿಕಾರ್ಜುನ ಖರ್ಗೆ: ಯಾಕೆ ಹೋಗ್ತಾರೆ ಎಂದ ನೆಟ್ಟಿಗರು

ಜಾತಿ ಸರ್ಟಿಫಿಕೇಟ್ ಪಡೆಯುವುದು ಹೇಗೆ, ಯಾವ ದಾಖಲೆಗಳು ಬೇಕು ಇಲ್ಲಿದೆ ಮಾಹಿತಿ

ಡಿಕೆ ಶಿವಕುಮಾರ್, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ರಹಸ್ಯ ಮೀಟಿಂಗ್: ನಡೆದಿದ್ದೇನು

ಮುಂದಿನ ಸುದ್ದಿ
Show comments