ನಟ ಸುಶಾಂತ್ ಸಿಂಗ್ ಸಹೋದರಿ ಬಿಹಾರದಲ್ಲಿ ಚುನಾವಣಾ ಕಣಕ್ಕೆ: ಯಾವ ಪಕ್ಷದಿಂದ ಇಲ್ಲಿದೆ ಮಾಹಿತಿ

Sampriya
ಸೋಮವಾರ, 13 ಅಕ್ಟೋಬರ್ 2025 (16:04 IST)
Photo Credit X
ಪಾಟ್ನಾ: ಮುಂದಿನ ತಿಂಗಳು ಬಿಹಾರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಅಖಾಢ ರಂಗೇರುತ್ತಿದೆ. ಜೆಡಿಯು ಮತ್ತು ಬಿಜೆಪಿ ಈಗಾಗಲೇ ಸೀಟು ಹಂಚಿಕೆ ಮಾಡಿಕೊಂಡಿವೆ. ಉಳಿದ ಪಕ್ಷಗಳಲ್ಲೂ ಚಟುವಟಿಕೆ ಬಿರುಸುಗೊಂಡಿದೆ.

ವಿರೋಧ ಪಕ್ಷಗಳ ಮೈತ್ರಿಕೂಟ ಮಹಾಘಟಬಂಧನದ ಭಾಗವಾದ ಸಿಪಿಐ(ಎಂಎಲ್)ಎಲ್ ಪಕ್ಷವು ಬಾಲಿವುಡ್ ನಟ ದಿವಂಗತ ಸುಶಾಂತ್ ಸಿಂಗ್ ರಜಪೂತ್ ಅವರ ಸಹೋದರಿ ದಿವ್ಯಾ ಗೌತಮ್ ಅವರಿಗೆ ಟಿಕೆಟ್ ನೀಡಲು ನಿರ್ಧರಿಸಿದೆ.

ಬಿಹಾರ ಮೂಲದ ಸುಶಾಂತ್ ಸಿಂಗ್ ರಜಪೂತ್ ಅವರು ಜೂನ್ 14, 2020 ರಂದು ಮುಂಬೈನ ತಮ್ಮ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದರು. 

ಸಿಪಿಐ(ಎಂಎಲ್)ಎಲ್, ದಿವ್ಯಾ ಅವರನ್ನು ಪಾಟ್ನಾ ಜಿಲ್ಲೆಯ ದಿಘಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸುತ್ತಿದೆ. ಸಿಪಿಐ(ಎಂಎಲ್)ಎಲ್ ನ ವಿದ್ಯಾರ್ಥಿ ವಿಭಾಗವಾದ ಎಐಎಸ್ಎ ಜೊತೆ ನಂಟು ಹೊಂದಿರುವ ಕಾರ್ಯಕರ್ತೆ ದಿವ್ಯಾ ಅವರು ತಾವು ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ದೃಢಪಡಿಸಿದ್ದಾರೆ.

ಸಿಪಿಐ(ಎಂಎಲ್) ಎಲ್ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ದಿವ್ಯಾ ಅವರು, ಅಕ್ಟೋಬರ್ 15 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ನಾಯಕರೊಬ್ಬರು ಖಚಿತಪಡಿಸಿದ್ದಾರೆ.


 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ಟ್ವಿಸ್ಟ್ ಕೊಡ್ತಿರೋದು ಇವರೇ

Karnataka Weather: ಚಳಿ ನಡುವೆಯೂ ಇಂದು ಈ ಜಿಲ್ಲೆಗಳಲ್ಲಿ ಮಳೆ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments