Webdunia - Bharat's app for daily news and videos

Install App

ಸನ್ಯಾಸಿನಿಯಾಗಲು ಹೊರಟ ನಟಿ ಮಮತಾ ಕುಲಕರ್ಣಿಗೆ ಅಖಾಡದಲ್ಲಿ ಭಾರೀ ಮುಖಭಂಗ

Sampriya
ಶುಕ್ರವಾರ, 31 ಜನವರಿ 2025 (14:14 IST)
Photo Courtesy X
ಪ್ರಯಾಗ್‌ರಾಜ್: ಮಹಾಕುಂಭ ಮೇಳದಲ್ಲಿ ಸನ್ಯಾಸಿನಿಯಾಗಲು ಹೊರಟ ಬಾಲಿವುಡ್‌ ನಟಿ ಮಮತಾ ಕುಲಕರ್ಣಿ ಅವರನ್ನು ಕಿನ್ನರ ಅಖಾಡದಿಂದ  ಹೊರದಬ್ಬಲಾಗಿದೆ. ಕಿನ್ನರ ಅಖಾಡ ಸ್ಥಾಪಕ ರಿಷಿ ಅಜಯ್ ದಾಸ್ ಶುಕ್ರವಾರ ಮಮತಾ ಕುಲಕರ್ಣಿ ಅವರನ್ನು ಅಖಾಡದಿಂದಲೇ ಹೊರಹಾಕಿದ್ದಾರೆ.

ಮಮತಾ ಕುಲಕರ್ಣಿ ಅವರು ಕನ್ನಡದ ವಿಷ್ಣು ವಿಜಯ ಸಿನಿಮಾದಲ್ಲಿ ನಟಿಸಿದ್ದು, ವಕ್ತ ಹಮಾರಾ ಹೈ, ಕ್ರಾಂತಿವೀರ, ಸಬ್ಸೆ ಬಡಾ ಕಿಲಾಡಿ ಇನ್ನಿತರ ಬಾಲಿವುಡ್ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ.

90ರ ದಶಕದಲ್ಲಿ ಬಾಲಿವುಡ್ ಸೇರಿದಂತೆ ಕನ್ನಡ ಸಿನಿಮಾದಲ್ಲಿ ನಟಿಸಿದ್ದ ಮಮತಾ ಕಿನ್ನರ ಅಖಾಡಕ್ಕೆ ಸೇರುವ ಮೂಲಕ ಮಹಾಮಂಡಲೇಶ್ವರಿಯಾಗಿದ್ದರು. ಮಮತಾ ಕುಲಕರ್ಣಿ ಹೆಸರನ್ನು ಬದಲಿಸಿಕೊಂಡು ಮಾಯಿ ಮಮತಾ ನಂದಗಿರಿ ಎಂದು ನಾಮಕರಣ ಮಾಡಿಕೊಂಡಿದ್ದರು.

ಕಳೆದ 2 ವರ್ಷಗಳಿಂದ ಜೂನಾ ಅಖಾಡದೊಂದಿಗೆ ಸಂಪರ್ಕದಲ್ಲಿದ್ದ ಮಮತಾ, 2-3 ತಿಂಗಳಿಂದ ಕಿನ್ನರ ಅಖಾಡದೊಂದಿಗೆ ನಿಕಟ ಸಂಪರ್ಕ ಬೆಳೆಸಿಕೊಂಡಿದ್ದರು. ಇದೀಗ ಅದೇ ಅಖಾಡದ ಭಾಗವಾಗಲು ನಿರ್ಧರಿಸಿ ಲೌಕಿಕ ಜಗತ್ತನ್ನು ತೊರೆದು ಆಧ್ಯಾತ್ಮಿಕ ಜಗತ್ತಿಗೆ ಇಳಿದಿದ್ದರು.

ಮಮತಾ ಕುಲಕರ್ಣಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದರು. ಬಳಿಕ ತಮ್ಮ ಸ್ವಂತ ಪಿಂಡ ಪ್ರದಾನಮಾಡುವ ಮೂಲಕ ಕಿನ್ನರ ಅಖಾಡಕ್ಕೆ ಸೇರ್ಪಡೆಯಾಗಿ ಮಹಾಮಂಡಲೇಶ್ವರರಾಗಿದ್ದರು. ಇವರಿಗೆ ಕಿನ್ನರ ಅಖಾಡದ ಆಚಾರ್ಯ ಮಹಾಮಂಡಲೇಶ್ವರ ಲಕ್ಷ್ಮಿ ನಾರಾಯಣ ತ್ರಿಪಾಠಿ ದೀಕ್ಷೆ ನೀಡಿದ್ದರು.



<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments