ನೌಕಾಪಡೆಗೆ ಶಿವಾಜಿಯ ಧ್ವಜ ಸೇರ್ಪಡೆ

Webdunia
ಶುಕ್ರವಾರ, 2 ಸೆಪ್ಟಂಬರ್ 2022 (13:59 IST)
ನವದೆಹಲಿ : ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ` IAC ವಿಕ್ರಾಂತ್’ ಅನ್ನು ಇಂದು ಭಾರತೀಯ ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆಗೊಳಿಸಲಾಗಿದೆ.
 
ಇದೇ ವೇಳೆ ಭಾರತೀಯ ನೌಕಾಪಡೆಯು ಹೊಸ ಧ್ವಜವನ್ನು ಪರಿಚಯಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಇಂದು ಧ್ವಜವನ್ನೂ ಅನಾವರಣಗೊಳಿಸಿದ್ದಾರೆ.

ಮರಾಠ ಸಾಮ್ರಾಜ್ಯದ ಚಕ್ರವರ್ತಿ ಶಿವಾಜಿಗೆ ಗೌರವ ಸೂಚಿಸುವ ಈ ಧ್ವಜವು ತಮ್ಮ ಆಳ್ವಿಕೆಯ ಕಾಲದಲ್ಲಿ ನೌಕಾಪಡೆಯನ್ನು ಹೊಂದಿದ್ದರು ಎಂಬುದನ್ನು ನೆಪಿಸುತ್ತದೆ. ಈ ನಿಟ್ಟಿನಲ್ಲಿಂದು ಭಾರತೀಯ ನೌಕಾಪಡೆಯು ಹೊಸ ಹೆಜ್ಜೆಯನ್ನಿರಿಸಿದೆ. 

ಸ್ವಾತಂತ್ರ್ಯ ಬಂದು 75 ವರ್ಷ ಪೂರೈಸಿದರೂ, ಭಾರತೀಯ ನೌಕಾಪಡೆಯ ಧ್ವಜದಲ್ಲಿ ಇನ್ನೂ ಉಳಿದುಕೊಂಡಿದ್ದ ವಸಾಹತುಶಾಹಿ ನೆನಪಿಸುವ ಅಂಶಗಳಿಗೆ ಇಂದು ತೆರೆ ಎಳೆಯಲಾಗಿದೆ. ಹೊಸ ಧ್ವಜ ಪರಿಚಯಿಸುವ ಮೂಲಕ ಗುಲಾಮಗಿರಿಯ ಸಂಕೇತ, ವಸಾಹತುಶಾಹಿಯ ಕುರುಹುಗಳನ್ನು ತೆಗೆದುಹಾಕಲಾಗಿದೆ.

ಭಾರತೀಯ ಕಡಲ ಪರಂಪರೆಗೆ ಅನುಗುಣವಾಗಿ ಈ ನೌಕಾಧ್ವಜ ನಿರ್ಮಾಣಗೊಂಡಿದ್ದು, `ನಿಶಾನ್’ ಎಂದು ಹೆಸರಿಡಲಾಗಿದೆ. ಇದು ರಕ್ಷಣಾ ವಲಯದಲ್ಲಿ ಆತ್ಮ ನಿರ್ಭರಕ್ಕೆ ಮತ್ತಷ್ಟು ಪುಷ್ಠಿ ನೀಡುವ ಉದ್ದೇಶವನ್ನೂ ಹೊಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments