Webdunia - Bharat's app for daily news and videos

Install App

ಪಾಕಿಸ್ತಾನದ ಸೇನಾ ಪಡೆಯ ಗುಂಡಿನ ದಾಳಿಗೆ ರಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು, ಹಲವರಿಗೆ ಗಾಯ

Sampriya
ಶನಿವಾರ, 10 ಮೇ 2025 (11:39 IST)
Photo Courtesy X
ಕಾಶ್ಮೀರ: ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಸೇನಾ ಸಂಘರ್ಷ ತೀವ್ರಗೊಂಡಿದೆ. ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ಭಾಗಗಳಲ್ಲಿ ಪಾಕಿಸ್ತಾನದ ಸೇನಾ ಪಡೆಯು ಶನಿವಾರ ತೀವ್ರ ಗುಂಡಿನ ದಾಳಿ ನಡೆಸಿದೆ.

ಪಾಕ್‌ ನಡೆಸಿದ ಗುಂಡಿನ ದಾಳಿಯಲ್ಲಿ ರಜೌರಿಯಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್‌ ಮೃತಪಟ್ಟಿದ್ದು, ಇಬ್ಬರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ರಜೌರಿ ನಗರದಲ್ಲಿರುವ ಜಿಲ್ಲಾಧಿಕಾರಿಗಳ ನಿವಾಸಕ್ಕೆ ಪಾಕ್‌ನ ಶೆಲ್ ಬಡಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಅವರು ಕೊನೆಯುಸಿರೆಳೆದಿದ್ದಾರೆ. ಗಾಯಗೊಂಡಿರುವ ಮತ್ತಿಬ್ಬರು ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜ್‌ಕುಮಾರ್ ನಿಧನಕ್ಕೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಸಂತಾಪ ವ್ಯಕ್ತಪಡಿಸಿದ್ದಾರೆ. ರಜೌರಿ ಪಟ್ಟಣವನ್ನು ಗುರಿಯಾಗಿಸಿ ಪಾಕ್ ನಡೆಸಿದ ಶೆಲ್ ದಾಳಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಮೃತಪಟ್ಟಿದ್ದಾರೆ. ಈ ಘಟನೆ ಕುರಿತು ನನ್ನ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಲು ಪದಗಳಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಒಮರ್‌ ಅಬ್ದುಲ್ಲಾ ಸಂತಾಪ ಸೂಚಿಸಿದ್ದಾರೆ

ಇಂದು ನಾವು ಸರ್ಕಾರದ ಆಡಳಿತ ಸೇವೆಗಳ ಸಮರ್ಪಿತ ಅಧಿಕಾರಿಯೊಬ್ಬರನ್ನು ಕಳೆದುಕೊಂಡಿದ್ದೇವೆ. ನಿನ್ನೆಯಷ್ಟೇ ರಾಜ್ ಕುಮಾರ್ ಅವರು ಉಪ ಮುಖ್ಯಮಂತ್ರಿ ಅವರೊಂದಿಗೆ ಮಾತುಕತೆ ನಡೆಸಿದ್ದರು. ಜತೆಗೆ, ನಾನು ಅಧ್ಯಕ್ಷತೆ ವಹಿಸಿದ್ದ ಆನ್‌ಲೈನ್ ಸಭೆಯಲ್ಲೂ ಭಾಗವಹಿಸಿದ್ದರು ಎಂದು ಒಮರ್‌ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನಿ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 17 ಕ್ಕೆ ಏರಿದೆ. ರಾಜೌರಿ, ಪೂಂಚ್ ಮತ್ತು ಉರಿಯಲ್ಲಿ ಅನೇಕ ವಸತಿ ಮನೆಗಳು ಶೆಲ್ ದಾಳಿಯಲ್ಲಿ ಹಾನಿಗೊಳಗಾದವು. ಪಾಕಿಸ್ತಾನದಲ್ಲಿನ ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿಕೊಂಡು ನಾಶಮಾಡಲು ಭಾರತವು ಆಪರೇಷನ್ ಸಿಂದೂರ್ ಪ್ರಾರಂಭಿಸಿದ ನಂತರ ಪಾಕಿಸ್ತಾನಿ ಪಡೆಗಳು ಜಮ್ಮು ಮತ್ತು ಕಾಶ್ಮೀರದ ಎಲ್‌ಒಸಿ ಮತ್ತು ಅಂತರರಾಷ್ಟ್ರೀಯ ಗಡಿಯಲ್ಲಿನ ಗಡಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿವೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕಿಸ್ತಾನದ ಮಿಲಿಟರಿ ಪೋಸ್ಟ್‌, ಡ್ರೋನ್ ಲಾಂಚ್‌ಪ್ಯಾಡ್‌ ಉಡೀಸ್‌

Operation Sindoor: ಭಾರತ ಏಟಿಗೆ ಪಾಕ್‌ ತತ್ತರ - ಇಸ್ಲಾಮಾಬಾದ್‌ನಲ್ಲಿ ಪೆಟ್ರೋಲ್ ಪಂಪ್‌ಗಳು ಬಂದ್‌

Operation Sindoor, ವಿಶ್ವ ಭೂಪಟದಲ್ಲೇ ಪಾಕಿಗಳು ಇಲ್ಲದಂತೆ ಆಗಬೇಕು: ಕಂಗನಾ ರನೌತ್‌

Karnataka Weather: ರಾಜ್ಯದ ಈ ಪ್ರದೇಶದಲ್ಲಿ ಇನ್ನೂ ಒಂದು ವಾರ ವ್ಯಾಪಕ ಮಳೆ

Operation Sindoor: ಊಹಿಸಲಾಗದ ರೀತಿ ಪಾಕಿಸ್ತಾನ ಮೇಲೆ ದಾಳಿ ಮಾಡಿದ ಭಾರತ

ಮುಂದಿನ ಸುದ್ದಿ
Show comments