ಇಂದು ಬೆಳಿಗ್ಗೆ ಬಿಜೆಪಿ ಸಂಸದೀಯ ಪಕ್ಷದ ನಾಯಕರಾಗಿ ಆಯ್ಕೆಯಾಗುವುದರ ಮೂಲಕ ಬಿಜೆಪಿ ನಾಯಕ ಪ್ರಧಾನಿಯಾಗುವ ದಾರಿಯನ್ನು ಅಧಿಕೃತವಾಗಿ ಕ್ರಮಿಸಿದರು
.
ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಸಂಸದೀಯ ಪಕ್ಷದ ನಾಯಕರಾಗಿ ಮೋದಿಯ ಹೆಸರನ್ನು ಪ್ರಸ್ತಾಪಿಸಿದರು ಮತ್ತು ಮುರಳಿ ಮನೋಹರ್ ಜೋಷಿ, ವೆಂಕಯ್ಯ ನಾಯ್ಡು, ನಿತಿನ್ ಗಡ್ಕರಿ, ಸುಷ್ಮಾ ಸ್ವರಾಜ್ ಮತ್ತು ಅರುಣ್ ಜೇಟ್ಲಿ ಸೇರಿದಂತೆ ಇತರ ನಾಯಕರು ಅದನ್ನು ಅನುಮೋದಿಸಿದರು.
545 ಲೋಕಸಭಾ ಸ್ಥಾನಗಳಲ್ಲಿ 282 ಸ್ಥಾನಗಳನ್ನು ತನ್ನದಾಗಿಸಿಕೊಂಡಿರುವ ಮೋದಿ ನೇತೃತ್ವದ ಬಿಜೆಪಿ ಕಾಂಗ್ರೆಸ್ಸನ್ನು ಹೊರತು ಪಡಿಸಿದರೆ, ಸ್ವಾತಂತ್ರ್ಯಾ ಪಡೆದಾಗಿನಿಂದ ಬಹುಮತ ಪಡೆದಿರುವ ಏಕೈಕ ಪಕ್ಷವಾಗಿದೆ.
ಪಾರ್ಲಿಮೆಂಟಿನ ಸೆಂಟ್ರಲ್ ಹಾಲ್‌ನಲ್ಲಿ ಸಭೆ ನಡೆದಿದ್ದು, ಮೋದಿ ಪ್ರಥಮ ಬಾರಿಗೆ ಇಲ್ಲಿ ಭೇಟಿ ನೀಡಿದ್ದಾರೆ ಎಂದು ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ಹೇಳಿದ್ದಾರೆ.