Select Your Language

Notifications

webdunia
webdunia
webdunia
webdunia

ಆಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ: 950ಕ್ಕೇರಿದ ಸಾವಿನ ಸಂಖ್ಯೆ

ಆಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ: 950ಕ್ಕೇರಿದ ಸಾವಿನ ಸಂಖ್ಯೆ
bengaluru , ಬುಧವಾರ, 22 ಜೂನ್ 2022 (15:53 IST)

ಅಫ್ಘಾನಿಸ್ತಾನದ ಪೂರ್ವ ಪಕ್ಟಿಕಾ ಪ್ರಾಂತ್ಯದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 950ರ ಗಡಿ ದಾಟಿದ್ದು, 650ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಪಕ್ಟಿಕಾ ಮತ್ತು ಖೋಸ್ಟ್ ಪ್ರಾಂತ್ಯಗಳಲ್ಲಿ ಸಂಭವಿಸಿದ ಭೂಕಂಪದಿಂದ ಹಲವಾರು ಮನೆಗಳು ಧ್ವಂಸಗೊಂಡಿದ್ದು ಪ್ರಾಥಮಿಕ ವರದಿ ಪ್ರಕಾರ 28೦ ಮೃತಪಟ್ಟಿದ್ದರು. ಆದರೆ ಇದೀಗ ಸಾವಿನ ಸಂಖ್ಯೆ 950ಕ್ಕೆ ಜಿಗಿತ ಕಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ.

ಯುಎಸ್ ಜಿಯೋಲಾಜಿಕಲ್ ಸರ್ವೆ (ಯುಎಸ್ಜಿಎಸ್) ಪ್ರಕಾರ, ಬುಧವಾರ ನಸುಕಿನ ವೇಳೆಯಲ್ಲಿ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಕೆಲವು ಭಾಗಗಳಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ.

ಆಗ್ನೇಯ ಅಫ್ಘಾನಿಸ್ತಾನದ ಖೋಸ್ಟ್ ನಗರದಿಂದ ಸುಮಾರು 44 ಕಿ.ಮೀ. (27 ಮೈಲುಗಳು) ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ಯುಎಸ್ಜಿಎಸ್ ಹೇಳಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ನಿಗೂಢ ಜ್ವರಕ್ಕೆ ಗ್ರಾಮಸ್ಥರು ಹೈರಾಣು! ಜನರಲ್ಲಿ ಕಾಡ್ತಿದೆ ಜ್ವರ?