Webdunia - Bharat's app for daily news and videos

Install App

ಪರೀಕ್ಷಾ ಭಯ: ಆತ್ಯಹತ್ಯೆಗೆ ಶರಣಾದ 8ರ ಬಾಲಕಿ

Webdunia
ಬುಧವಾರ, 8 ಏಪ್ರಿಲ್ 2015 (12:20 IST)
ಪರೀಕ್ಷಾ ಭಯಕ್ಕೆ ಸಿಲುಕಿದ್ದ 8 ವರ್ಷದ ಬಾಲಕಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜ್‌ಕೋಟ್‌ನಲ್ಲಿ ಬೆಳಕಿಗೆ ಬಂದಿದೆ. ಬಾಲಕಿ ಮೂರನೇ ತರಗತಿಯಲ್ಲಿ ಓದುತ್ತಿದ್ದಳು. 

 
ಭಾವತಿಪುರ ನಿವಾಸಿಯಾಗಿರುವ ಮನಸುಖ್ ಭಾಯಿ ಮತ್ತು ಭಾವ್ನಾಬೆನ್ ದಂಪತಿಗಳ ಮೂವರು ಮಕ್ಕಳಲ್ಲಿ ಕಿರಿಯಳಾಗಿರುವ ಹೀರಲ್ ಈ ಕೆಟ್ಟ ನಿರ್ಧಾರ ಕೈಗೊಂಡ ಬಾಲಕಿಯಾಗಿದ್ದಾಳೆ. ಆಕೆಯ ತಂದೆ-ತಾಯಿಗಳು ಕೂಲಿ ಕಾರ್ಮಿಕರಾಗಿದ್ದಾರೆ. ಹೀರಲ್ ಪರೀಕ್ಷೆ ಸಮೀಪಿಸುತ್ತಿರುವುದರಿಂದ ಭಯಗೊಂಡಿದ್ದಳು ಎಂದು ತಿಳಿದು ಬಂದಿದೆ. 
 
ಮಂಗಳವಾರ ಬೆಳಿಗ್ಗೆ ದಂಪತಿಗಳಿಬ್ಬರು ಕೆಲಸಕ್ಕೆ ಹೋದಾಗ ಬಾಲಕಿ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ. ಮಧ್ಯಾಹ್ನ ಆಕೆಯ ತಾಯಿ ಮನೆಗೆ ಬಂದಾಗ ಬಾಲಕಿ ಅತಿ ಗಂಭೀರ ಸ್ಥಿತಿಯಲ್ಲಿ ನೆಲದ ಮೇಲೆ ಬಿದ್ದಿರುವುದು ಕಂಡು ಬಂದಿದೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. 
 
ಆಕೆಯನ್ನು ಅಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸುವಾಗ "ಅಪ್ಪ ನಾನು ಶಾಲೆಗೆ ಹೋಗುವುದಿಲ್ಲ, ನನಗೇನೂ ಬರುವುದಿಲ್ಲ", ಎಂದು ಬಾಲಕಿ ಪದೇ ಪದೇ ಹಲುಬುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. 
 
ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ದೇಹ ಸಂಪೂರ್ಣ ಸುಟ್ಟಿದ್ದರಿಂದ ಸಂಜೆ ಹೊತ್ತಿಗೆ ಕೊನೆಯುಸಿರೆಳೆದಿದ್ದಾಳೆ. ತಂದೆ-ತಾಯಿಗಳ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments