Webdunia - Bharat's app for daily news and videos

Install App

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಅತಿಶಿ ಗುಡ್‌ಬೈ

Sampriya
ಭಾನುವಾರ, 9 ಫೆಬ್ರವರಿ 2025 (14:03 IST)
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ದಶಕಗಳಿಂದ ಅಧಿಕಾರದಲ್ಲಿದ್ದ ಆಮ್‌ ಆದ್ಮಿ ಪಕ್ಷ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಅತಿಶಿ ರಾಜೀನಾಮೆ ನೀಡಿದ್ದಾರೆ.

ಭಾನುವಾರ ಅಶಿತಿ ಅವರು ರಾಜ್ಯಪಾಲ ವಿ.ಕೆ ಸಕ್ಸೇನಾ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.  ಬಿಜೆಪಿ ಬಹುಮತ ಪಡೆದಿದ್ದು, ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲ ಮುಂದುವರಿದಿದೆ. ಒಂದೆರಡು ದಿನಗಳಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಆಯ್ಕೆ ನಡೆಯಲಿದೆ.

ಈ ಬಾರಿ ಚುನಾವಣೆಯಲ್ಲಿ ಎಎಪಿ ವರಿಷ್ಠ, ಮಾಜಿ ಸಿಎಂ ಕೇಜ್ರಿವಾಲ್‌, ಮನೀಶ್‌ ಸಿಸೋಡಿಯಾ ಸೇರಿದಂತೆ ಘಟಾನುಘಟಿ ನಾಯಕರೇ ಸೋತು ಸುಣ್ಣವಾದ ಹೊರತಾಗಿಯೂ ಅತಿಶಿ ತನ್ನ ಕಲ್ಕಾಜಿ ಕ್ಷೇತ್ರವನ್ನು ಉಳಿಸಿಕೊಂಡರು. ಆರಂಭದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್‌ ಬಿಧೂರಿ ವಿರುದ್ಧ ತೀವ್ರ ಹಿನ್ನಡೆ ಅನುಭವಿಸಿದ್ದ ಅತಿಶಿ 8-9ನೇ ಸುತ್ತಿನ ಬಳಿಕ‌ ಸತತವಾಗಿ ಮುನ್ನಡೆ ಕಾಯ್ದುಕೊಂಡು ಗೆಲುವು ಸಾಧಿಸಿದ್ರು.

ಕಲ್ಕಾಜಿ ಕ್ಷೇತ್ರದಲ್ಲಿ ಆಪ್‌ ಅಭ್ಯರ್ಥಿ ಅತಿಶಿ 52,154 ಮತಗಳನ್ನು ಪಡೆದು 3,521 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರೆ, ಬಿಧೂರಿ 48,633 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ.  

ತೀವ್ರ ಕುತೂಹಲ ಕೆರಳಿಸಿದ್ದ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, 27 ವರ್ಷಗಳ ಬಳಿಕ ಬಿಜೆಪಿ ಅಧಿಕಾರಕ್ಕೇರಿದೆ. ಆದ್ರೆ ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿದ್ದ ಆಪ್‌ ಸೋಲು ಕಂಡಿದ್ದರೆ, ʻಕೈʼ ಪಾಳಯ ಸತತ 3ನೇ ಬಾರಿಗೆ ಶೂನ್ಯ ಸಂಪಾದನೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಿಬ್ಬರ ನಕಲಿ ಎನ್‌ಕೌಂಟರ್‌: ಪಂಜಾಬ್‌ನ ನಿವೃತ್ತ ಪೊಲೀಸ್ ಅಧಿಕಾರಿಗೆ 10ವರ್ಷ ಕಠಿಣ ಜೈಲು ವಾಸ

ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ: ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್‌, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

ಯಾವಾ ಸಾಧನೆಗೆ ಸಾಧನಾ ಸಮಾವೇಶ ಎಂದು ಕಾಂಗ್ರೆಸ್ಸಿಗರೇ ಉತ್ತರಿಸಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments