Select Your Language

Notifications

webdunia
webdunia
webdunia
webdunia

ಬೆಂಗಳೂರು ಬಳಿಕ ಗುಜರಾತ್‌ನಲ್ಲಿ 2 ತಿಂಗಳ ಮಗುವಿನಲ್ಲಿ HMPV ವೈರಸ್ ಪತ್ತೆ

ಬೆಂಗಳೂರು ಬಳಿಕ ಗುಜರಾತ್‌ನಲ್ಲಿ 2 ತಿಂಗಳ ಮಗುವಿನಲ್ಲಿ HMPV ವೈರಸ್ ಪತ್ತೆ

Sampriya

ಗಾಂಧೀನಗರ , ಸೋಮವಾರ, 6 ಜನವರಿ 2025 (14:36 IST)
ಗಾಂಧೀನಗರ: ಕರ್ನಾಟಕದಲ್ಲಿ ಹೆಚ್‌ಎಮ್‌ಪಿವಿ ಸೋಕು ಪ್ರಕರಣ ವರದಿಯಾದ ಬೆನ್ನಲ್ಲೇ ಗುಜರಾತ್‌ನಲ್ಲಿ ಮೊದಲ ಸೋಂಕು ಪತ್ತೆಯಾಗಿದೆ.

ಚೀನಾದಲ್ಲಿ ಕಾಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ ಭಾರತಕ್ಕೂ ಕಾಲಿಟ್ಟಿದೆ. ಬೆಂಗಳೂರಿನ ಎರಡು ಮಕ್ಕಳಲ್ಲಿ ವೈರಸ್ ಪತ್ತೆಯಾಗಿದೆ. ಇದೀಗ ಗುಜರಾತ್‌ನಲ್ಲಿ ಮೊದಲ ಸೋಂಕು ವರದಿಯಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯವು ಕರ್ನಾಟಕದಲ್ಲಿ ಎರಡು ಹೆಚ್‌ಎಮ್‌ಪಿವಿ ಪ್ರಕರಣಗಳನ್ನು ದೃಢಪಡಿಸಿದ ಕೆಲವೇ ಗಂಟೆಗಳಲ್ಲಿ ಗುಜರಾತ್‌ನಲ್ಲಿ ಮತ್ತೊಂದು ಪ್ರಕರಣ ವರದಿಯಾಗಿದೆ. ಇದು ಗುಜರಾತಿನ ಮೊದಲ ಪ್ರಕರಣವಾಗಿದ್ದು, 2 ವರ್ಷದ ಮಗುವಿನಲ್ಲಿ ವೈರಸ್ ಪತ್ತೆಯಾಗಿದೆ. ರೋಗಿಯನ್ನು ಅಹಮದಾಬಾದ್‌ನ ಚಂದ್‌ಖೇಡಾ ಪ್ರದೇಶದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಪತ್ತೆಯಾಗಿದ್ದನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ದೃಢಪಡಿಸಿದೆ. 3 ತಿಂಗಳ ಮಗು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೆ, 8 ತಿಂಗಳ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಕೆ ಕಾಣುತ್ತಿದೆ.

ಬೆಂಗಳೂರಿನ ಪ್ರಕರಣದ ನಂತರ ಹೇಳಿಕೆ ಬಿಡುಗಡೆ ಮಾಡಿದ ಐಸಿಎಂಆರ್, ದೇಶದಾದ್ಯಂತ ಉಸಿರಾಟದ ಕಾಯಿಲೆಗಳನ್ನು ಮೇಲ್ವಿಚಾರಣೆ ಮಾಡಲು ಐಸಿಎಂಆರ್ ನಡೆಸುತ್ತಿರುವ ಪ್ರಯತ್ನಗಳ ಭಾಗವಾಗಿ ಎರಡೂ ಪ್ರಕರಣಗಳನ್ನು ಗುರುತಿಸಲಾಗಿದೆ. ಹೆಚ್‌ಎಮ್‌ಪಿವಿ ಭಾರತ ಸೇರಿದಂತೆ ವಿಶ್ವಾದ್ಯಂತ ಹರಡಿದ್ದು, ಹಲವು ದೇಶಗಳಲ್ಲಿ ಸೋಂಕು ಪತ್ತೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜೀವ ಬಲಿಪಡೆದ ಮೈಕೊರೆಯುವ ಚಳಿ: ಉಸಿರುಗಟ್ಟಿ ಒಂದೇ ಕುಟುಂಬದ ಐವರು ದಾರುಣ ಸಾವು