Webdunia - Bharat's app for daily news and videos

Install App

ಬೆಂಗಳೂರು ಬಳಿಕ ಗುಜರಾತ್‌ನಲ್ಲಿ 2 ತಿಂಗಳ ಮಗುವಿನಲ್ಲಿ HMPV ವೈರಸ್ ಪತ್ತೆ

Sampriya
ಸೋಮವಾರ, 6 ಜನವರಿ 2025 (14:36 IST)
ಗಾಂಧೀನಗರ: ಕರ್ನಾಟಕದಲ್ಲಿ ಹೆಚ್‌ಎಮ್‌ಪಿವಿ ಸೋಕು ಪ್ರಕರಣ ವರದಿಯಾದ ಬೆನ್ನಲ್ಲೇ ಗುಜರಾತ್‌ನಲ್ಲಿ ಮೊದಲ ಸೋಂಕು ಪತ್ತೆಯಾಗಿದೆ.

ಚೀನಾದಲ್ಲಿ ಕಾಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ ಭಾರತಕ್ಕೂ ಕಾಲಿಟ್ಟಿದೆ. ಬೆಂಗಳೂರಿನ ಎರಡು ಮಕ್ಕಳಲ್ಲಿ ವೈರಸ್ ಪತ್ತೆಯಾಗಿದೆ. ಇದೀಗ ಗುಜರಾತ್‌ನಲ್ಲಿ ಮೊದಲ ಸೋಂಕು ವರದಿಯಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯವು ಕರ್ನಾಟಕದಲ್ಲಿ ಎರಡು ಹೆಚ್‌ಎಮ್‌ಪಿವಿ ಪ್ರಕರಣಗಳನ್ನು ದೃಢಪಡಿಸಿದ ಕೆಲವೇ ಗಂಟೆಗಳಲ್ಲಿ ಗುಜರಾತ್‌ನಲ್ಲಿ ಮತ್ತೊಂದು ಪ್ರಕರಣ ವರದಿಯಾಗಿದೆ. ಇದು ಗುಜರಾತಿನ ಮೊದಲ ಪ್ರಕರಣವಾಗಿದ್ದು, 2 ವರ್ಷದ ಮಗುವಿನಲ್ಲಿ ವೈರಸ್ ಪತ್ತೆಯಾಗಿದೆ. ರೋಗಿಯನ್ನು ಅಹಮದಾಬಾದ್‌ನ ಚಂದ್‌ಖೇಡಾ ಪ್ರದೇಶದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಪತ್ತೆಯಾಗಿದ್ದನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ದೃಢಪಡಿಸಿದೆ. 3 ತಿಂಗಳ ಮಗು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೆ, 8 ತಿಂಗಳ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಕೆ ಕಾಣುತ್ತಿದೆ.

ಬೆಂಗಳೂರಿನ ಪ್ರಕರಣದ ನಂತರ ಹೇಳಿಕೆ ಬಿಡುಗಡೆ ಮಾಡಿದ ಐಸಿಎಂಆರ್, ದೇಶದಾದ್ಯಂತ ಉಸಿರಾಟದ ಕಾಯಿಲೆಗಳನ್ನು ಮೇಲ್ವಿಚಾರಣೆ ಮಾಡಲು ಐಸಿಎಂಆರ್ ನಡೆಸುತ್ತಿರುವ ಪ್ರಯತ್ನಗಳ ಭಾಗವಾಗಿ ಎರಡೂ ಪ್ರಕರಣಗಳನ್ನು ಗುರುತಿಸಲಾಗಿದೆ. ಹೆಚ್‌ಎಮ್‌ಪಿವಿ ಭಾರತ ಸೇರಿದಂತೆ ವಿಶ್ವಾದ್ಯಂತ ಹರಡಿದ್ದು, ಹಲವು ದೇಶಗಳಲ್ಲಿ ಸೋಂಕು ಪತ್ತೆಯಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments