ಚೆನ್ನೈ: ತಮಿಳುನಾಡಿನಲ್ಲಿ ಸಿನಿಮಾ ನಟರು ರಾಜಕೀಯ ಪ್ರವೇಶಿಸುವುದು ಹೊಸದೇನಲ್ಲ. ಕಮಲ್ ಹಾಸನ್, ರಜನೀಕಾಂತ್ ನಂತರ ಮತ್ತೊಬ್ಬ ಸ್ಟಾರ್ ನಟ ರಾಜಕೀಯ ಪ್ರವೇಶದ ಸುಳಿವು ನೀಡಿದ್ದಾರೆ.
									
			
			 
 			
 
 			
					
			        							
								
																	ಅದು ಇಳಯದಳಪತಿ ವಿಜಯ್. ಎಷ್ಟೋ ಸಿನಿಮಾಗಳ ಮೂಲಕ ಪ್ರೇಕ್ಷಕರಿಗೆ ಮೋಡಿ ಮಾಡಿ ತಮಿಳುನಾಡಿನಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ವಿಜಯ್ ಇದೀಗ ರಾಜಕೀಯ ಪ್ರವೇಶದ ಸುಳಿವು ನೀಡಿದ್ದಾರೆ.
									
										
								
																	ತಮ್ಮ ಹೊಸ ಸಿನಿಮಾ ಸರ್ಕಾರ್ ಧ್ವನಿ ಸುರುಳಿ ಬಿಡುಗಡೆ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ನಟಿಸುವುದಕ್ಕಿಂತ, ಮುಂದೊಂದು ದಿನ ತಾನು ನಿಜವಾಗಿಯೂ ಮುಖ್ಯಮಂತ್ರಿಯಾದರೆ ಹೇಗಿರುತ್ತದೆ ಎಂದು ಅಭಿಮಾನಿಗಳನ್ನು ಪ್ರಶ್ನಿಸಿದ್ದಾರೆ. ವಿಜಯ್ ಈ ಮಾತುಗಳು ಅವರ ರಾಜಕೀಯ ಪ್ರವೇಶದ ಬಗ್ಗೆ ಚರ್ಚೆ ಹುಟ್ಟು ಹಾಕಿದೆ.
									
											
							                     
							
							
			        							
								
																	ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.