ಗುಜರಾತ್ : ಸೂರತ್ನಲ್ಲಿರುವ ಕೆಮಿಕಲ್ ಕಾರ್ಖಾನೆಯೊಂದರ ಸಮೀಪ ಇಂದು ಮುಂಜಾನೆ ಅನಿಲ ಸೋರಿಕೆಯಾಗಿ 6 ಮಂದಿ ಮೃತಪಟ್ಟಿದ್ದು,
22ಜನ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೆರ್ರಿ ಕೆಮಿಕಲ್ ತುಂಬಿದ್ದ ಟ್ಯಾಂಕರ್ ಸೋರಿಕೆಯಾದ ಪರಿಣಾಮ ಈ ಅವಘಢ ಉಂಟಾಗಿದೆ ಎಂದು ಹೇಳಲಾಗಿದೆ.
ಗುಜರಾತ್ನ ಸೂರತ್ನಲ್ಲಿರುವ ಕೈಗಾರಿಕಾ ಪ್ರದೇಶ ಸಚಿನ್ ಜಿಐಡಿಸಿ ಎಂಬಲ್ಲಿರುವ ಕಾರ್ಖಾನೆಯಲ್ಲಿ ದುರಂತ ನಡೆದಿದ್ದು, ಸ್ಥಳಕ್ಕೆ ಅಗ್ನಿಶಾಮಕದಳದವರು ಆಗಮಿಸಿದ್ದಾರೆ. ಅಲ್ಲಿಂದ ಜನರನ್ನು ಸ್ಥಳಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ.
ಸದ್ಯ ಅಸ್ವಸ್ಥರಾದವರನ್ನೆಲ್ಲ ಸೂರತ್ ನ್ಯೂ ಸಿವಿಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.