Publish Date: Thu, 02 Aug 2018 (11:58 IST)
Updated Date: Thu, 02 Aug 2018 (12:01 IST)
ಮಧುರೈ : ತಮಿಳುನಾಡಿನ ಆಡಳಿತಾರೂಢ ಪಕ್ಷದ ಶಾಸಕ ಎ.ಕೆ.ಬೋಸ್ ಅನಾರೋಗ್ಯದಿಂದಾಗಿ ಬುಧವಾರ ತಡರಾತ್ರಿ ಮಧುರೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕೆಲ ವರ್ಷಗಳ ಹಿಂದಿನಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ಎ.ಕೆ. ಬೋಸ್ ಅವರನ್ನು ಕೆಲ ದಿನಗಳ ಹಿಂದೆ ಮಧುರೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ತಡರಾತ್ರಿ ಬೋಸ್ ಕೊನೆಯುಸಿರೆಳೆದಿದ್ದಾರೆ.
ಇವರು ತಮ್ಮ ಪತ್ನಿ ಹಾಗೂ ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಎಐಎಡಿಎಂಕೆ ಪಕ್ಷದ ಯುವ ಘಟಕದ ನಾಯಕನಾಗಿ ರಾಜಕೀಯ ಜೀವನ ಆರಂಭಿಸಿದ ಬೋಸ್, ಮಧುರೈ ಜಿಲ್ಲಾ ಘಟಕದ ಅಧ್ಯಕ್ಷರು ಆಗಿದ್ದರು. 2006ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ತಮಿಳುನಾಡಿನ ವಿಧಾನಸಭೆ ಪ್ರವೇಶಿಸಿದ ಬೋಸ್ ಒಟ್ಟು ಮೂರು ಬಾರಿ ಶಾಸಕರಾಗಿ ಅನೇಕ ಜನಾಭಿವೃದ್ಧಿ ಕಾರ್ಯಗಳನ್ನ ಮಾಡಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ