ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಎಐಎಡಿಎಂಕೆ ಪಕ್ಷದ ಅಧಿನಾಯಕಿ ಜೆ.ಜಯಲಲಿತಾ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದು, ಮೇ 23 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇತ್ತಿಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಎಐಎಡಿಎಂಕೆ ಶಾಸಕರ ಸಭೆಯಲ್ಲಿ ಜಯಲಲಿತಾ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಲಾಯಿತು ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
ತಮಿಳುನಾಡಿನಲ್ಲಿ ಸರಕಾರ ರಚಿಸಲು ಅಗತ್ಯವಾದ ಮ್ಯಾಜಿಕ್ ನಂಬರ್ 118 ದಾಟಿರುವ ಎಐಎಡಿಎಂಕೆ ಪಕ್ಷ ವಿಧಾನಸಭೆ ಚುನಾವಣೆಯಲ್ಲಿ 130 ಸ್ಥಾನಗಳಿಸಿ ನಿಚ್ಚಳ ಬಹುಮತ ಪಡೆದಿದೆ.
ಮುಖ್ಯಮಂತ್ರಿ ಜಯಲಲಿತಾ ಆತ್ಮಿಯ ಬಳಗದಲ್ಲಿರುವ ಓ.ಪನ್ನಿರ್ ಸೆಲ್ವಂ ಮತ್ತು ಕೈಗಾರಿಕೆ ಖಾತೆ ಸಚಿವ ಪಿ.ತಂಗಮಣಿ ಕೂಡಾ ಭಾರಿ ಬಹುಮತದಿಂದ ಆಯ್ಕೆಯಾಗಿದ್ದಾರೆ.
ವೆಬ್‌ದುನಿಯಾ
ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.