Select Your Language

Notifications

webdunia
webdunia
webdunia
webdunia

ಎಐಸಿಸಿ ಅಧ್ಯಕ್ಷ ಖರ್ಗೆ ಪ್ರಯಾಣಿಸಿದ ಹೆಲಿಕಾಪ್ಟರ್ ತಪಾಸಣೆ: ಪ್ರಜಾಪ್ರಭುತ್ವದ ಕಗ್ಗೊಲೆ ಎಂದ ಕಾಂಗ್ರೆಸ್‌

Mallikarjun Kharge

Sampriya

ಪಟ್ನಾ , ಭಾನುವಾರ, 12 ಮೇ 2024 (14:48 IST)
ಪಟ್ನಾ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಯಾಣಿಸಿದ ಹೆಲಿಕಾಪ್ಟರ್‌ ಅನ್ನು ಚುನಾವಣಾ ಆಯೋಗದ ಅಧಿಕಾರಿಗಳು ಭಾನುವಾರ ತಪಾಸಣೆ ನಡೆಸಿದ್ದು, ಇದಕ್ಕೆ ಕಾಂಗ್ರೆಸ್‌ ಕಿಡಿಕಾರಿದೆ.

 ಬಿಹಾರದ ಸಮಷ್ಠಿಪುರದಲ್ಲಿ ಚುನಾವಣಾ ಸಮಾವೇಶಕ್ಕೆ ಹೆಲಿಕಾಪ್ಟರ್‌ ಮೂಲಕ ಖರ್ಗೆ ತೆರಳಿದ್ದರು. ಅಲ್ಲಿ ಅವರ ಹೆಲಿಕಾಪ್ಟರ್‌ ಅನ್ನು ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ.

ಅಧಿಕಾರಿಗಳು ತಪಾಸಣೆ ಮಾಡುವ ವಿಡಿಯೊವನ್ನು ಕಾಂಗ್ರೆಸ್ ವಕ್ತಾರ ರಾಜೇಶ್ ರಾಥೋಡ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿ ಬಳಿಕ ಇದೀಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಲಿಕಾಪ್ಟರ್‌ ಅನ್ನು ಬಿಹಾರದ ಸಮಷ್ಠಿಪುರದಲ್ಲಿ ಪೊಲೀಸ್ ಅಧಿಕಾರಿಗಳಿಂದ ಚುನಾವಣಾ ಆಯೋಗ ತಪಾಸಣೆ ಮಾಡಿಸಿದೆ. ಪೊಲೀಸರ ಈ ಕ್ರಮ ಪ್ರತಿಪಕ್ಷಗಳ ಬಗ್ಗೆ ಚುನಾವಣಾ ಆಯೋಗದ ದುರುದ್ದೇಶದ ವರ್ತನೆಯನ್ನು ತೋರಿಸುತ್ತದೆ, ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಅವರು ಕಿಡಿಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಯಮುನೇತ್ರಿಗೆ ಬರುವ ಭಕ್ತರೇ ಎಚ್ಚರ: ಯಾತ್ರೆಯನ್ನು ಮುಂದೂಡುವಂತೆ ಪೊಲೀಸ್ ಮನವಿ