ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

Sampriya
ಗುರುವಾರ, 2 ಅಕ್ಟೋಬರ್ 2025 (13:30 IST)
Photo Credit X
ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯವನ್ನು ಪ್ರಧಾನಿ ನರೇಂದ್ರ ಮೋದಿ ವಿಚಾರಿಸಿದ್ದಾರೆ. 

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತನಾಡಿದೆ. ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ ಮತ್ತು ಬೇಗನೆ ಗುಣಮುಖರಾಗುವಂತೆ ಹಾರೈಸಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಖರ್ಗೆಯವರು ಬೇಗ ಗುಣಮುಖರಾಗಲಿ ಮತ್ತು ದೀರ್ಘಾಯುಷ್ಯ ಅವರದ್ದಾಗಲಿ ಎಂದು ಪ್ರಾರ್ಥಿಸುತ್ತೇನೆಂದೂ ತಿಳಿಸಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಖರ್ಗೆ ಅವರ ಆರೋಗ್ಯ ಕುರಿತು ಪುತ್ರ, ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದರು. ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಕೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದು ಒಂದು ಸಣ್ಣ ಶಸ್ತ್ರಚಿಕಿತ್ಸೆಯಾಗಿತ್ತು. ಶಸ್ತ್ರಚಿಕಿತ್ಸೆಯ ನಂತರ ಅವರ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ.

ಅಕ್ಟೋಬರ್ 3 ರಿಂದ ತಮ್ಮ ಕೆಲಸವನ್ನು ಪುನರಾರಂಭಿಸುವ ನಿರೀಕ್ಷೆಯಿದೆ. ಅವರ ಎಲ್ಲಾ ನಿಗದಿತ ಕಾರ್ಯಯೋಜನೆಗಳಿಗೆ ಹಾಜರಾಗುತ್ತಾರೆ. ಎಲ್ಲರೂ ನೀಡಿದ ಕಾಳಜಿ, ಬೆಂಬಲ ಮತ್ತು ಪ್ರೀತಿಗೆ ನಮ್ಮ ಕೃತಜ್ಞತೆಗಳು ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಶಬರಿಮಲೆ ಯಾತ್ರೆ ಶುರು, ದರ್ಶನಕ್ಕೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

ಮುಂದಿನ ಸುದ್ದಿ
Show comments