Select Your Language

Notifications

webdunia
webdunia
webdunia
webdunia

ಜಯಲಲಿತಾ ಚಿಕಿತ್ಸೆಗೆ ಏಮ್ಸ್ ವೈದ್ಯರ ತಂಡ

Supreme Court
ಚೆನ್ನೈ , ಗುರುವಾರ, 6 ಅಕ್ಟೋಬರ್ 2016 (12:18 IST)
ಅನಾರೋಗ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರನ್ನು ಪರೀಕ್ಷಿಸಿಲು ನವದೆಹಲಿಯ ಪ್ರತಿಷ್ಠಿತ ಏಮ್ಸ್ ವೈದ್ಯರ ತಂಡ ಚೆನ್ನೆಗೆ ಬಂದಿಳಿದಿದೆ. 
ಏಮ್ಸ್‌ ವೈದ್ಯರಾದ ಡಾ. ಖೈಲ್‌ನಾನಿ, ಡಾ. ಅಂಜನ್ ಮತ್ತು ಡಾ. ನಿತೀಶ್ ಜಯಾ ಆರೋಗ್ಯ ತಪಾಸಣೆ ನಡೆಸಲು ಚೆನ್ನೈನ ಅಪೋಲೋ ಆಸ್ಪತ್ಪೆಗೆ ಆಗಮಿಸಿದ್ದಾರೆ. 
 
ಕಳೆದ ವಾರ ಲಂಡನ್ ಮತ್ತು ಅಮೇರಿಕದ ತಜ್ಞ ವೈದ್ಯರು ಜಯಲಲಿತಾ ಅವರ ದೇಹಸ್ಥಿತಿಯನ್ನು ಪರೀಕ್ಷಿಸಿ ಚಿಕಿತ್ಸೆಯನ್ನು ನೀಡಿದ್ದರು. 
 
ಲೋಕಸಭಾ ಡೆಪ್ಯುಟಿ ಸ್ಪೀಕರ್, ಎಐಡಿಎಂಕೆ ನಾಯಕ ತಂಬಿದೊರೈ ಇಂದು ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಜಯಾ ಆರೋಗ್ಯವನ್ನು ವಿಚಾರಿಸಿದ್ದಾರೆ ಎಂದು ತಿಳಿದು ಬಂದಿದೆ. 
 
ಇನ್ನು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಆರೋಗ್ಯದ ವಿವರವನ್ನು ಬಹಿರಂಗ ಪಡಿಸುವಂತೆ ಸಾಮಾಜಿಕ ಕಾರ್ಯಕರ್ತ ಟ್ರಾಫಿಕ್ ರಾಮಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. 
 
ಜಯಾ ದೇಹ ಸ್ಥಿತಿ ಬಗ್ಗೆ ಊಹಾಪೋಹಗಳು ಎದ್ದಿರುವ ಹಿನ್ನೆಲೆಯಲ್ಲಿ ಈ ಕುರಿತು ಸ್ಪಷ್ಟನೆ ನೀಡುವಂತೆ ಟ್ರಾಫಿಕ್ ರಾಮಸ್ವಾಮಿ ಕೋರ್ಟ್ ಮೆಟ್ಟಿಲೇರಿದ್ದರು. ಜಯಾ ಆರೋಗ್ಯ ಹೇಗಿದೆ? ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ? ಅವರು ತಮ್ಮ ಸಚಿವ ಸಂಪುಟದ ಸದಸ್ಯರನ್ನು ಭೇಟಿಯಾಗಿದ್ದಾರೆಯೇ? ಅವರು ಆಸ್ಪತ್ರೆಯಲ್ಲಿರುವ ಫೋಟೋವನ್ನು ಬಿಡುಗಡೆ ಮಾಡಿ ಎಂದು ರಾಮಸ್ವಾಮಿ ಅರ್ಜಿಯಲ್ಲಿ ಕೇಳಿಕೊಂಡಿದ್ದರು.
 
ಮಂಗಳವಾರ  ರಾಮಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಆಸ್ಪತ್ರೆಯಿಂದ ಮಾಹಿತಿ ಕಲೆ ಹಾಕಿ ಏನಾಗಿದೆ ಎಂಬುದನ್ನು  ಕೋರ್ಟ್ ಮೂಲಕ ಬುಧವಾರದೊಳಗೆ ಬಹಿರಂಗ ಪಡಿಸಿ ಎಂದು ತಮಿಳುನಾಡು ಸರ್ಕಾರಕ್ಕೆ ತಾಕೀತು ಮಾಡಿತ್ತು. ಆದರೆ ತಮಿಳುನಾಡು ಸರ್ಕಾರ ಜಯಾ ಆರೋಗ್ಯದ ಬಗ್ಗೆ ಕೋರ್ಟ್ಗೆ ಯಾವುದೇ ಮಾಹಿತಿ ನೀಡಿಲ್ಲ.
 
ಪಿಐಎಲ್‌ಗೆ ಸಂಬಂಧಿಸಿದಂತೆ ಬುಧವಾರ ವಾದ, ಪ್ರತಿವಾದದ ಕೇಳಿದ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿತು. ರಾಮಸ್ವಾಮಿ ಪ್ರಚಾರಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆಂದು ಕೋರ್ಟ್ ಚಾಟಿ ಬೀಸಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

Share this Story:

Follow Webdunia kannada

ಮುಂದಿನ ಸುದ್ದಿ

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪಾಕ್ ವಿರುದ್ಧ ಪ್ರತಿಭಟನೆ