Webdunia - Bharat's app for daily news and videos

Install App

ವಿಮಾನ ದುರಂತವಾಗಿ ವಾರ ಕಳೆಯುವಷ್ಟರಲ್ಲೇ ಏರ್ ಇಂಡಿಯಾ ಸಿಬ್ಬಂದಿಗಳ ಪಾರ್ಟಿ: ವಿಡಿಯೋ

Krishnaveni K
ಶನಿವಾರ, 28 ಜೂನ್ 2025 (12:16 IST)
ಗುರ್ಗಾಂವ್: ಅಹ್ಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ದುರಂತವಾಗಿ ಇನ್ನೂ ವಾರ ಕಳೆಯುವ ಮೊದಲೇ ಏರ್ ಇಂಡಿಯಾ ಸಿಬ್ಬಂದಿ ಗುರ್ಗಾಂವ್ ನ ಕಚೇರಿಯಲ್ಲಿ ಕುಣಿದು ಕುಪ್ಪಳಿಸಿ ಪಾರ್ಟಿ ಮಾಡಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಹ್ಮದಾಬಾದ್ ನಲ್ಲಿ ಜೂನ್ 12 ರಂದು ಲಂಡನ್ ಗೆ ಪ್ರಯಾಣ ಬೆಳೆಸಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನವಾಗಿ 270 ಕ್ಕೂ ಹೆಚ್ಚು ಮಂದಿ ಜೀವಂತ ದಹನವಾಗಿದ್ದರು. ಇದಾಗಿ ಒಂದು ವಾರ ಕಳೆಯುವಷ್ಟರಲ್ಲಿ ಏರ್ ಇಂಡಿಯಾ ಸಿಬ್ಬಂದಿಯ ಪಾರ್ಟಿ ನಡೆದಿದೆ.

ಜೂನ್ 20 ರಂದು ಗುರ್ಗಾಂವ್ ನ ಕಚೇರಿಯಲ್ಲಿ ಪಾರ್ಟಿ ನಡೆದಿದೆ ಎನ್ನಲಾಗಿದ್ದು ಹಲವು ಉನ್ನತ ಅಧಿಕಾರಿಗಳೂ ಭಾಗಿಯಾಗಿದ್ದರು. ಈ ವಿಡಿಯೋದಲ್ಲಿ ಸಿಬ್ಬಂದಿಗಳು ಡ್ಯಾನ್ಸ್ ಮಾಡಿಕೊಂಡು ಮೋಜು ಮಾಡುತ್ತಿರುವ ದೃಶ್ಯವಿದೆ. ಈ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೇ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಇದರ ಬೆನ್ನಲ್ಲೇ ಏರ್ ಇಂಡಿಯಾ ನಾಲ್ವರು ಅಧಿಕಾರಿಗಳನ್ನು ಕೆಲಸದಿಂದ ಕಿತ್ತು ಹಾಕಿದೆ. ಉಳಿದ ಸಿಬ್ಬಂದಿಗಳಿಗೆ ಎಚ್ಚರಿಕೆ ಕೊಟ್ಟಿದೆ. ಎಐಎಸ್ಎಟಿಎಸ್ ನ ನಾಲ್ವರು ಹಿರಿಯ ಉದ್ಯೋಗಿಗಳು ಕೂಡಲೇ ರಾಜೀನಾಮೆ ಕೊಟ್ಟು ತೆರಳುವಂತೆ ಸೂಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ
Show comments