ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯು ಗುಣಮಟ್ಟ ಮತ್ತಷ್ಟು ಹದಗೆಟ್ಟಿದೆ. ಭಾನುವಾರ ಬೆಳಿಗ್ಗೆ ಗಾಳಿಯ ಗುಣಮಟ್ಟ ಕಳಪೆ ಮಟ್ಟದಲ್ಲೇ ಇಳಿದಿದೆ.
ದೆಹಲಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) 381 ದಾಖಲಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ತಿಳಿಸಿದೆ. 25 ಕೇಂದ್ರಗಳಲ್ಲಿ 300ಕ್ಕೂ ಅಧಿಕ ಎಕ್ಯೂಐ ದಾಖಲಾಗಿದೆ.
ಸಿಪಿಸಿಬಿ ಮಾನದಂಡಗಳ ಪ್ರಕಾರ 0 ಮತ್ತು 50 ರ ನಡುವಿನ ವಾಯು ಗುಣಮಟ್ಟವನ್ನು ಉತ್ತಮ 51 ರಿಂದ 100 ತೃಪ್ತಿದಾಯಕ, 101 ರಿಂದ 200 ಮಧ್ಯಮ, 201 ರಿಂದ 300 ಕಳಪೆ, 301 ರಿಂದ 400 ತುಂಬಾ ಕಳಪೆ ಮತ್ತು 401 ರಿಂದ 500 ತೀವ್ರ ಎಂದು ಪರಿಗಣಿಸಲಾಗುತ್ತದೆ.
ಸಿಪಿಸಿಬಿಯ ಸಮೀರ್ ಆ್ಯಪ್ ಮಾಹಿತಿಯ ಪ್ರಕಾರ, ದೆಹಲಿಯ 13 ಮೇಲ್ವಿಚಾರಣಾ ಕೇಂದ್ರಗಳು ಗಾಳಿಯ ಗುಣಮಟ್ಟವನ್ನು ತೀವ್ರ ಕಳಪೆ ಮಟ್ಟದಲ್ಲಿ ದಾಖಲಾಗಿದೆ.
ಕನಿಷ್ಠ ತಾಪಮಾನವು 14 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದ್ದು, ಇದು ಋತುವಿನ ಸರಾಸರಿಗಿಂತ 2.7 ಡಿಗ್ರಿ ಹೆಚ್ಚು. ಗರಿಷ್ಠ ತಾಪಮಾನವು ಸುಮಾರು 26 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ.