Publish Date: Fri, 06 Oct 2017 (10:53 IST)
Updated Date: Fri, 06 Oct 2017 (10:56 IST)
ನವದೆಹಲಿ: ಭಾರತೀಯ ವಾಯುಸೇನೆಗೆ ಸೇರಿದ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದ ತವಾಂಗ್ ಬಳಿ ಅಪಘಾತಕ್ಕೀಡಾಗಿದ್ದು ಆರು ಯೋಧರು ದುರ್ಮರಣಕ್ಕೀಡಾಗಿದ್ದಾರೆ.
7 ಜನ ಯೋಧರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತವಾಂಗ್ ಬಳಿ ಪತನವಾಗಿದೆ. ಬೆಳಿಗ್ಗೆ 6.30 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ವಾಯುಸೇನೆಗೆ ಸೇರಿದ ಎಂ 17 ವಿ5 ಹೆಲಿಕಾಪ್ಟರ್ ದುರ್ಘಟನೆಗೀಡಾಗಿರುವುದು.
ಹೆಲಿಕಾಪ್ಟರ್ ನಲ್ಲಿ ಒಟ್ಟು ಏಳು ಮಂದಿ ಯೋಧರಿದ್ದರು. ಇವರ ಪೈಕಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನೋರ್ವ ಯೋಧನಿಗೆ ಗಂಭೀರ ಗಾಯಗಳಾಗಿವೆ ಎಂದು ಸೇನಾ ಮೂಲಗಳು ಹೇಳಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ