ನವದೆಹಲಿ : ಮಾಸ್ಟರ್ ಕಾರ್ಡ್ನ ಮಾಜಿ ಸಿಇಒ ಭಾರತೀಯ ಮೂಲದ ಅಜಯ್ ಬಂಗಾ ಅವರು ಮುಂದಿನ ವಿಶ್ವಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ವಿಶ್ವಬ್ಯಾಂಕ್ ಬುಧವಾರ ದೃಢಪಡಿಸಿದೆ.
ಮುಂದಿನ 5 ವರ್ಷಗಳ ಅವಧಿಗೆ ಬಂಗಾ ವಿಶ್ವಬ್ಯಾಂಕ್ನ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. 187 ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿರುವ ವಿಶ್ವಬ್ಯಾಂಕ್ ಅಧ್ಯಕ್ಷ ಹುದ್ದೆಗೆ ಬಂಗಾ ಅವರು ಆಯ್ಕೆಯಾಗಿದ್ದು, ಈ ಹುದ್ದೆ ಅಲಂಕರಿಸಿದ ಪ್ರಥಮ ಅನಿವಾಸಿ ಭಾರತೀಯ ಎನಿಸಿಕೊಂಡಿದ್ದಾರೆ.
ಟ್ರಂಪ್ ಆಡಳಿತದಲ್ಲಿ ನೇಮಕಗೊಂಡ ಹಾಲಿ ವಿಶ್ವಬ್ಯಾಂಕ್ ಅಧ್ಯಕ್ಷ ಡೇವಿಡ್ ಮಲ್ಪಾಸ್ ಅವರ ಅವಧಿ ಜೂನ್ 2ಕ್ಕೆ ಅಂತ್ಯಗೊಳ್ಳಲಿದೆ. ನಂತರ ಬಂಗಾ ಅಧ್ಯಕ್ಷರಾಗಿ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ.