Select Your Language

Notifications

webdunia
webdunia
webdunia
webdunia

ಶಾಸಕ ಸ್ಥಾನಕ್ಕೆ ಅಖಿಲೇಶ್‌ ಯಾದವ್‌ ರಾಜೀನಾಮೆ: ರಾಷ್ಟ್ರ ರಾಜಕಾರಣದತ್ತ ಗಮನ

Akhilesh Yadav

Sampriya

ಲಖನೌ , ಬುಧವಾರ, 12 ಜೂನ್ 2024 (18:15 IST)
Photo Courtesy X
ಲಖನೌ: ಕರ್ಹಾಲ್ ವಿಧಾನಸಭಾ ಸ್ಥಾನಕ್ಕೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌ ಇಂದು ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಅವರು ಕನೌಜ್‌ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ಇದೀಗ ಈ ಕ್ಷೇತ್ರವನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದಾರೆ.

ಎರಡು ಕ್ಷೇತ್ರಗಳ ಪಕ್ಷದ ನಾಯಕರು, ಕಾರ್ಯಕರ್ತರ ಜತೆ ಸಮಾಲೋಚನೆ ನಡೆಸಿದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಎಸ್‌ಪಿ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ 37 ಸ್ಥಾನಗಳನ್ನು ಗಳಿಸುವ ಮೂಲಕ ದೇಶದ 3ನೇ ಅತಿ ಹೆಚ್ಚು ಸ್ಥಾನಗಳನ್ನು ಪಡೆದ ರಾಜಕೀಯ ಪಕ್ಷವಾಗಿ ಎಸ್‌ಪಿ ಗುರುತಿಸಿಕೊಂಡಿದೆ.

ರಾಷ್ಟ್ರ ರಾಜಧಾನಿಯಲ್ಲಿ ಅಖಿಲೇಶ್‌ ಅವರ ಉಪಸ್ಥಿತಿಯು ಪಕ್ಷದ ನಿಲುವನ್ನು ವ್ಯಕ್ತಪಡಿಸಲು ಹಾಗೂ ಬೆಂಬಲ ಸೂಚಿಸಲು ಸಹಾಯವಾಗುತ್ತದೆ. ಇಂಡಿಯಾ ಮೈತ್ರಿಕೂಟದದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಪಡೆದ ಎರಡನೇ ಪಕ್ಷವಾಗಿ ಸಮಾಜವಾದಿ ಪಕ್ಷ ಹೊರಹೊಮ್ಮಿದೆ.

ಅಖಿಲೇಶ್‌ ಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದರು. ಮೂಲಗಳ ಪ್ರಕಾರ ಅವರ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ ಅವರು ವಿರೋಧ ಪಕ್ಷದ ನಾಯಕರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅಖಿಲೇಶ್ ಅವರ ಸೋದರಳಿಯ ಪ್ರತಾಪ್ ಯಾದವ್ ಕರ್ಹಾಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಒಡಿಶಾದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೋಹನ್ ಚರಣ್ ಮಾಝಿ