Webdunia - Bharat's app for daily news and videos

Install App

ಶಾಸಕ ಸ್ಥಾನಕ್ಕೆ ಅಖಿಲೇಶ್‌ ಯಾದವ್‌ ರಾಜೀನಾಮೆ: ರಾಷ್ಟ್ರ ರಾಜಕಾರಣದತ್ತ ಗಮನ

Sampriya
ಬುಧವಾರ, 12 ಜೂನ್ 2024 (18:15 IST)
Photo Courtesy X
ಲಖನೌ: ಕರ್ಹಾಲ್ ವಿಧಾನಸಭಾ ಸ್ಥಾನಕ್ಕೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌ ಇಂದು ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಅವರು ಕನೌಜ್‌ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ಇದೀಗ ಈ ಕ್ಷೇತ್ರವನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದಾರೆ.

ಎರಡು ಕ್ಷೇತ್ರಗಳ ಪಕ್ಷದ ನಾಯಕರು, ಕಾರ್ಯಕರ್ತರ ಜತೆ ಸಮಾಲೋಚನೆ ನಡೆಸಿದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಎಸ್‌ಪಿ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ 37 ಸ್ಥಾನಗಳನ್ನು ಗಳಿಸುವ ಮೂಲಕ ದೇಶದ 3ನೇ ಅತಿ ಹೆಚ್ಚು ಸ್ಥಾನಗಳನ್ನು ಪಡೆದ ರಾಜಕೀಯ ಪಕ್ಷವಾಗಿ ಎಸ್‌ಪಿ ಗುರುತಿಸಿಕೊಂಡಿದೆ.

ರಾಷ್ಟ್ರ ರಾಜಧಾನಿಯಲ್ಲಿ ಅಖಿಲೇಶ್‌ ಅವರ ಉಪಸ್ಥಿತಿಯು ಪಕ್ಷದ ನಿಲುವನ್ನು ವ್ಯಕ್ತಪಡಿಸಲು ಹಾಗೂ ಬೆಂಬಲ ಸೂಚಿಸಲು ಸಹಾಯವಾಗುತ್ತದೆ. ಇಂಡಿಯಾ ಮೈತ್ರಿಕೂಟದದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಪಡೆದ ಎರಡನೇ ಪಕ್ಷವಾಗಿ ಸಮಾಜವಾದಿ ಪಕ್ಷ ಹೊರಹೊಮ್ಮಿದೆ.

ಅಖಿಲೇಶ್‌ ಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದರು. ಮೂಲಗಳ ಪ್ರಕಾರ ಅವರ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ ಅವರು ವಿರೋಧ ಪಕ್ಷದ ನಾಯಕರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅಖಿಲೇಶ್ ಅವರ ಸೋದರಳಿಯ ಪ್ರತಾಪ್ ಯಾದವ್ ಕರ್ಹಾಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

ಮುಂದಿನ ಸುದ್ದಿ
Show comments