Select Your Language

Notifications

webdunia
webdunia
webdunia
webdunia

ಜ್ಞಾನವಾಪಿ ಸರ್ವೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ

ಜ್ಞಾನವಾಪಿ ಸರ್ವೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ
ನವದೆಹಲಿ , ಶುಕ್ರವಾರ, 4 ಆಗಸ್ಟ್ 2023 (11:33 IST)
ನವದೆಹಲಿ : ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ವಾರಣಾಸಿಯ ಜ್ಞಾನವಾಪಿ ಮಸೀದಿ ಸಮೀಕ್ಷೆ ನಡೆಸಲು ಅನುಮತಿ ನೀಡಿ ಅಲಹಾಬಾದ್ ಹೈಕೋರ್ಟ್ ಗುರುವಾರ ತೀರ್ಪು ನೀಡಿದೆ.

ಜ್ಞಾನವಾಪಿ ಮಸೀದಿ ಸಂಕೀರ್ಣದ ಎಎಸ್ಐ ಸಮೀಕ್ಷೆಯನ್ನು ಪ್ರಾರಂಭಿಸಲಾಗುವುದು ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ ಎಂದು ಜ್ಞಾನವಾಪಿ ಸಮೀಕ್ಷೆ ಪ್ರಕರಣದಲ್ಲಿ ಹಿಂದೂ ಪರವಾಗಿ ವಾದ ಮಂಡಿಸಿದ್ದ ವಿಷ್ಣು ಶಂಕರ್ ಜೈನ್ ಸುದ್ದಿಗಾರರಿಗೆ ತಿಳಿಸಿದ್ದಾರೆ. 

ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಮಸೀದಿ ಸಂಕೀರ್ಣದ ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್ಐ) ಸಮೀಕ್ಷೆಯನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ಸಲ್ಲಿಸಿದ್ದ ಮನವಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಜಲ ವಿವಾದ ಶೀಘ್ರದಲ್ಲೇ ಸಮಸ್ಯೆ ಬಗೆಹರಿಸಲು ಯತ್ನ: ಶಿವಕುಮಾರ್