ಪಕ್ಷ ಚಟುವಟಿಕೆ ಆರೋಪ: ಬಿಆರ್‌ಎಸ್ ಎಂಎಲ್‌ಸಿ ಕವಿತಾ ಬಿಗ್ ಶಾಕ್

Sampriya
ಮಂಗಳವಾರ, 2 ಸೆಪ್ಟಂಬರ್ 2025 (16:18 IST)
Photo Credit X
ನವದೆಹಲಿ: ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಆರೋಪದಡಿಯಲ್ಲಿ ಎಂಎಲ್‌ಸಿ ಕೆ ಕವಿತಾ ಅವರನ್ನು ಬಿಆರ್‌ಎಸ್‌ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ತಕ್ಷಣದಿಂದ ಜಾರಿಗೆ ಬರುವಂತೆ ಕವಿತಾ ಅವರನ್ನು ಅಮಾನತು ಮಾಡಿ ಬಿಆರ್‌ಎಸ್ ಪಕ್ಷದ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್ ಆದೇಶ ಹೊರಡಿಸಿದ್ದಾರೆ. 

ಪಕ್ಷದ ಎಂಎಲ್‌ಸಿ ಕೆ. ಕವಿತಾ ಅವರ ಇತ್ತೀಚಿನ ನಡವಳಿಕೆ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳು ಬಿಆರ್‌ಎಸ್ ಪಕ್ಷಕ್ಕೆ ಹಾನಿಯಾಗುತ್ತಿರುವ ಕಾರಣ ಪಕ್ಷದ ನಾಯಕತ್ವವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. 

ಪಕ್ಷದ ಅಧ್ಯಕ್ಷ ಕೆ. ಚಂದ್ರಶೇಖರ್ ರಾವ್ ಅವರು ತಕ್ಷಣದಿಂದಲೇ ಕೆ.ಕವಿತಾ ಅವರನ್ನು ಪಕ್ಷದಿಂದ ಅಮಾನತುಗೊಳಿಸುವ ನಿರ್ಧಾರ ಕೈಗೊಂಡಿದ್ದಾರೆ ಎಂದು ಬಿಆರ್‌ಎಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಪದಚ್ಯುತಿಗೆ ತಕ್ಷಣದ ಕಾರಣ ಕವಿತಾ ಅವರ ಸೋದರ ಸಂಬಂಧಿಗಳಾದ ಟಿ ಹರೀಶ್ ರಾವ್ ಮತ್ತು ಸಂತೋಷ್ ಕುಮಾರ್ ವಿರುದ್ಧ ಇತ್ತೀಚೆಗೆ ಹೇಳಿಕೆ ನೀಡಿರುವುದು. 

ಬಿಆರ್‌ಎಸ್ ಆಡಳಿತಾವಧಿಯಲ್ಲಿ ನಿರ್ಮಾಣವಾದ ಕಾಳೇಶ್ವರಂ ಯೋಜನೆಯಲ್ಲಿನ ಅವ್ಯವಹಾರದ ಬಗ್ಗೆ ಸಿಬಿಐ ತನಿಖೆಗೆ ರೇವಂತ್ ರೆಡ್ಡಿ ಸರ್ಕಾರ ನಿರ್ಧರಿಸಿದ್ದರಿಂದ ತಮ್ಮ ತಂದೆಗೆ ಮಾನಹಾನಿ ಮಾಡಲು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರೊಂದಿಗೆ ಮೌನ ತಿಳುವಳಿಕೆ ಇದೆ ಎಂದು ಕವಿತಾ ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments