Select Your Language

Notifications

webdunia
webdunia
webdunia
webdunia

ಕೇಂದ್ರೀಯ ತನಿಖಾ ಸಂಸ್ಥೆಗಳ ದುರುಪಯೋಗ ಆರೋಪ

ಕೇಂದ್ರೀಯ ತನಿಖಾ ಸಂಸ್ಥೆಗಳ ದುರುಪಯೋಗ ಆರೋಪ
ನವದೆಹಲಿ , ಶನಿವಾರ, 25 ಮಾರ್ಚ್ 2023 (11:25 IST)
ನವದೆಹಲಿ : ಕೇಂದ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ ನಂತಹ ಕೇಂದ್ರೀಯ ಸಂಸ್ಥೆಗಳನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ 14 ರಾಜಕೀಯ ಪಕ್ಷಗಳು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿವೆ.
 
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಜಗಮ್ ಮತ್ತು ರಾಷ್ಟ್ರೀಯ ಜನತಾ ದಳವೂ ಸೇರಿ 14 ವಿಪಕ್ಷಗಳು ಒಳಗೊಂಡಿರುವ ಅರ್ಜಿದಾರರು ಬಂಧನಕ್ಕೆ ಪೂರ್ವ ಮಾರ್ಗಸೂಚಿಗಳನ್ನು ಕೋರಿ ಅರ್ಜಿ ಸಲ್ಲಿಸಿದ್ದಾರೆ. 

ಪ್ರಕರಣವನ್ನು ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ, ಸಿಜೆಐ ಡಿ.ವೈ ಚಂದ್ರಚೂಡ್ ಪೀಠದ ಮುಂದೆ ಮನವಿ ಮಾಡಿದರು. ಕೇಂದ್ರೀಯ ತನಿಖಾ ಸಂಸ್ಥೆಗಳ 95 ಪ್ರತಿಶತ ತನಿಖೆಗಳು ವಿರೋಧ ಪಕ್ಷಗಳ ನಾಯಕರ ವಿರುದ್ಧವಾಗಿವೆ. ಸಿಬಿಐ ಇಡಿಯನ್ನು ಸಂಪೂರ್ಣವಾಗಿ ನಮ್ಮ ವಿರುದ್ಧ ಬಳಸಲಾಗುತ್ತಿದೆ ಎಂದು ವಾದಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಹಣಕ್ಕಾಗಿ ಜನ್ಮ ನೀಡಿದ ಕೆಲವೇ ನಿಮಿಷದಲ್ಲಿ ಮಗುವನ್ನು ಮಾರಿದ ತಾಯಿ!