Select Your Language

Notifications

webdunia
webdunia
webdunia
webdunia

ನಮಾಜ್ ವೇಳೆ ಹನುಮಾನ್ ಪಠಣ ಆರೋಪ: ಹಿಂದೂ ವ್ಯಕ್ತಿ ಮೇಲೆ ಅನ್ಯ ಕೋಮಿನ ಯುವಕರಿಂದ ಹಲ್ಲೆ

ನಮಾಜ್ ವೇಳೆ ಹನುಮಾನ್ ಪಠಣ ಆರೋಪ: ಹಿಂದೂ ವ್ಯಕ್ತಿ ಮೇಲೆ ಅನ್ಯ ಕೋಮಿನ  ಯುವಕರಿಂದ ಹಲ್ಲೆ

Sampriya

ಬೆಂಗಳೂರು , ಸೋಮವಾರ, 18 ಮಾರ್ಚ್ 2024 (14:23 IST)
ಬೆಂಗಳೂರು: ನಗರದ ಮೊಬೈಲ್ ಅಂಗಡಿಯೊಂದರಲ್ಲಿ ನಮಾಜ್‌ ಮಾಡುವ ಸಮಯದಲ್ಲಿ ಹನುಮಾನ್‌ ಚಾಲೀಸ್‌ ಹಾಕಿದ ಎಂದು ಆರೋಪಿಸಿ ಅಂಗಡಿ ಮಾಲೀಕನ ಮೇಲೆ ಐವರು ಅನ್ಯ ಕೋಮಿನ ಯುವಕರು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
 
ಈ ಘಟನೆ ನಗರದ ಹಲಸೂರು ಗೇಟ್‌ ಠಾಣೆ ವ್ಯಾಪ್ತಿಯಲ್ಲಿರುವ ನಗರತ್‌ಪೇಟೆಯಲ್ಲಿ ಬೆಳಗಿಕೆ ಬಂದಿದೆ. 
ನಗರತ್ ಪೇಟೆಯ ಜುಮ್ಮಾ ಮಸೀದಿ ರಸ್ತೆಯಲ್ಲಿ ಭಾನುವಾರ ಈ ಘಟನೆ ನಡೆದಿದೆ.   ನಮಾಜ್ ವೇಳೆ ಭಕ್ತಿಗೀತೆ ಹಾಡು ಹಾಕಿದ್ದಕ್ಕೆ ಐದಾರು ಮುಸ್ಲಿಂ ಯುವಕರು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಾರೆ.  
 
ಸಂಜೆ ಅಂಗಡಿಯಲ್ಲಿ ಹನುಮಾನ್‌ ಚಾಲೀಸ್‌ ಹಾಕಿದ್ದು, ಜೋರು ಶಬ್ಧ ಕೊಟ್ಟಿದ್ದ ಎಂದು ಹಲ್ಲೆ ಮಾಡಿದ ಯುವಕರು ಆರೋಪಿಸಿದ್ದಾರೆ.
 
ಪೊಲೀಸರು ಈ ಸಂಬಂಧ ಪ್ರತಿಕ್ರಿಯಿಸಿದ, ಅದೇ ವೇಳೆ ಅನ್ಯಕೋವಿನ ಯುವಕರು ನಮಾಜ್‌ ಮಾಡುತ್ತಿದ್ದರು ಎನ್ನಲಾಗಿದ್ದು, ನಮಾಜ್‌ ಮಾಡುವಾಗ ಜೋರು ಶಬ್ಧ ಕೇಳಿದ್ದರಿಂದ ಆಕ್ರೋಶಗೊಂಡ ಐವರು ಯುವಕರು, ಮುಖೇಶ್‌ ಅಂಗಡಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಬಳಿಕ ಮುಖೇಶ್ ನನ್ನು ಅಂಗಡಿಯಿಂದ ಹೊರ ಎಳೆದು ಮನಸೋ ಇಚ್ಚೆ ಹಲ್ಲೆ ನಡೆಸಿದ್ದಾರೆ. ಅದರಿಂದ ಮುಖೇಶ್‌ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ಸಂಬಂಧ 5 ಯುವಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
 
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು-ಸುವ್ಯವಸ್ಥೆ ಕುರಿತು ವಿಪಕ್ಷ ನಾಯಕ ಆರ್ ಅಶೋಕ್ ಎಕ್ಸ್‌ ಖಾತೆಯಲ್ಲಿ ಘಟನೆ ವಿಡಿಯೋ ಹಂಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 
'ಕರ್ನಾಟಕದಲ್ಲಿ ಹನುಮಾನ್ ಚಲೀಸಾ ನಿಷೇಧ ಮಾಡಲಾಗಿದೆಯೇ ಸಿಎಂ ಸಿದ್ದರಾಮಯ್ಯ ನವರೇ? ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕಾರಣ, ಮಿತಿಮೀರಿದ ಓಲೈಕೆಯಿಂದ ಮೂಲಭೂತವಾದಿ ಮುಸ್ಲಿಮರಿಗೆ ನಾವು ಏನು ಮಾಡಿದರೂ ನಡೆಯುತ್ತೆ ಎನ್ನುವ ಮೊಂಡು ಧೈರ್ಯ ಬಂದಿದ್ದು, ಬೆಂಗಳೂರಿನ ಶಿವಾಜಿನಗರದ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಮುಸ್ಲಿಂ ಯುವಕರ ಗುಂಪೊಂದು ಹಿಂದೂಗಳ ಮೇಲೆ ಹಲ್ಲೆ ನಡೆಸಿದೆ. ರಾಜ್ಯದಲ್ಲಿ, ಅದರಲ್ಲೂ ವಿಶೇಷವಾಗಿ ಬೆಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆ ಅನ್ನುವುದೇ ಇಲ್ಲದಂತಾಗಿದ್ದು, ಜನಸಾಮಾನ್ಯರು ರಕ್ಷಣೆ ಇಲ್ಲದೆ ಭಯದಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ನನಗೆ ಅರಮನೆ ಬೇಡ, ಜನರ ನಡುವೆ ಇರುತ್ತೇನೆ: ಯದುವೀರ್ ಒಡೆಯರ್