ಬಿಆರ್ ಎಸ್ ಬಿಟ್ಟು ಕಾಂಗ್ರೆಸ್ ಸೇರಿದ ಅಲ್ಲು ಅರ್ಜುನ್ ಮಾವ

Krishnaveni K
ಶನಿವಾರ, 17 ಫೆಬ್ರವರಿ 2024 (10:41 IST)
Photo Courtesy: Twitter
ಹೈದರಾಬಾದ್: ಜನಪ್ರಿಯ ನಟ ಅಲ್ಲು ಅರ್ಜುನ್ ಮಾವ ಕಾಂಚರ್ಲ ಚಂದ್ರಶೇಖರ ರೆಡ್ಡಿ ಬಿಆರ್ ಎಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿಕೊಂಡಿದ್ದಾರೆ.

ಚಂದ್ರಶೇಖರ ರೆಡ್ಡಿ ಅಲ್ಲು ಅರ್ಜುನ್ ಪತ್ನಿ ಸ್ನೇಹ ರೆಡ್ಡಿಯವರ ತಂದೆ. ಚಂದ್ರಶೇಖರ ರೆಡ್ಡಿ ಕಳೆದ ವಿಧಾನಸಭೆ ಚುನಾವಣೆ ವೇಳೆ ಚಂದ್ರಶೇಖರ ರಾವ್ ಅವರ ಬಿಆರ್ ಎಸ್ ಪಕ್ಷದಲ್ಲಿದ್ದರು. ಆದರೆ ಇದೀಗ ಲೋಕಸಭೆ ಚುನಾವಣೆಗೆ ಮೊದಲು ತಮ್ಮ ಸಂಗಡಿಗರೊಂದಿಗೆ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಚಂದ್ರಶೇಖರ ರೆಡ್ಡಿ ಬಹಳ ಸಮಯದಿಂದ ಬಿಆರ್ ಎಸ್ ಪಕ್ಷದಲ್ಲಿ ಕಾರ್ಯನಿರ್ವಹಿಸಿದ್ದರು.

ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಚಂಡ ಗೆಲುವು ಸಾಧಿಸಿತ್ತು. ಇದಾದ ಬಳಿಕ ತೆಲಂಗಾಣದಲ್ಲಿ ಕಾಂಗ್ರೆಸ್ ದಿನೇ ದಿನೇ ಬಲವರ್ಧನೆ ಮಾಡಿಕೊಳ್ಳುತ್ತಿದೆ. ಇತ್ತ ಚಂದ್ರಶೇಖರ್ ರಾವ್ ಅವರ ಕುಟುಂಬ ರಾಜಕಾರಣದಿಂದ ಬೇಸತ್ತು ಕೆಲವರು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ.

ಚುನಾವಣೆ ಸಮಯದಲ್ಲಿ ಎಲ್ಲಾ ಪಕ್ಷಗಳಿಂದಲೂ ನಾಯಕರು ಪಕ್ಷಾಂತರ ಮಾಡುವುದ ಸಾಮಾನ್ಯ. ಇತ್ತೀಚೆಗಷ್ಟೇ ಮಿಲಿಂದ್ ದಿಯೋರಾ ಶಿವಸೇನೆಗೆ ಸೇರ್ಪಡೆಯಾಗಿದ್ದರೆ ಅಶೋಕ್ ಚವಾನ್ ಬಿಜೆಪಿ ಪಾಳಯ ಸೇರಿಕೊಂಡಿದ್ದರು. ಚುನಾವಣೆ ಸಮಯದಲ್ಲಿ ಇನ್ನಷ್ಟು ನಾಯಕರ ಪಕ್ಷಾಂತರ ಗ್ಯಾರಂಟಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments