Publish Date: Sun, 16 May 2021 (09:31 IST)
Updated Date: Sun, 16 May 2021 (09:33 IST)
ಮಲಪ್ಪುರಂ: ಕೊರೋನಾ ಪೀಡಿತ ಯುವತಿಯ ಮೇಲೆ ಆಂಬ್ಯುಲೆನ್ಸ್ ಸಿಬ್ಬಂದಿಯೋರ್ವ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಕೇರಳದ ಮಲಪ್ಪುರಂನಲ್ಲಿ ನಡೆದಿದೆ.
ಏಪ್ರಿಲ್ ಅಂತ್ಯದಲ್ಲಿ ಯುವತಿ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದಳು. ಆಕೆಯ ಸ್ಥಿತಿ ಗಂಭೀರವಾಗಿದ್ದರಿಂದ ಎಂಆರ್ ಐ ಸ್ಕ್ಯಾನಿಂಗ್ ಮಾಡಲು ವೈದ್ಯರು ಸಲಹೆ ನೀಡಿದ್ದರು. ಅದರಂತೆ ಆಂಬ್ಯುಲೆನ್ಸ್ ನಲ್ಲಿ ಕರೆದೊಯ್ಯುತ್ತಿರುವಾಗ ಪ್ರಶಾಂತ್ ಎಂಬ ಸಿಬ್ಬಂದಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.
ಆರೋಗ್ಯ ಚೇತರಿಸಿಕೊಂಡ ಬಳಿಕ ತನ್ನ ಮೇಲಾದ ದೌರ್ಜನ್ಯವನ್ನು ಯುವತಿ ಆಸ್ಪತ್ರೆಯ ವೈದ್ಯರ ಬಳಿ ಹೇಳಿಕೊಂಡಿದ್ದಾಳೆ. ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅದರನ್ವಯ ಆರೋಪಿಯನ್ನು ಬಂಧಿಸಲಾಗಿದೆ.