Webdunia - Bharat's app for daily news and videos

Install App

ಜಯಲಲಿತಾ ಭೇಟಿಗೆ ಅಮಿತ್ ಶಾ, ಅರುಣ್ ಜೇಟ್ಲಿ ?

Webdunia
ಬುಧವಾರ, 12 ಅಕ್ಟೋಬರ್ 2016 (11:11 IST)
ಅನಾರೋಗ್ಯ ಪೀಡಿತರಾಗಿ ಆಸ್ಪತ್ರೆ ಸೇರಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಆರೋಗ್ಯ ವಿಚಾರಿಸಲು ಗಣ್ಯಾತಿಗಣ್ಯರು ಆಸ್ಪತ್ರೆಗೆ ಆಗಮಿಸುತ್ತಿದ್ದು, ಬುಧವಾರ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಹ ಚೆನ್ನೈಗೆ ಆಗಮಿಸುವ ಸಾಧ್ಯತೆಗಳಿವೆ.

ನಾಯಕದ್ವಯರು ಇಂದು ಮಧ್ಯಾಹ್ನ ಅಪೋಲೋ ಆಸ್ಪತ್ರೆಗೆ ಭೇಟಿ ನೀಡುವ ಸಾದ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
 
ಪಕ್ಷದ ಮೂಲಗಳ ಪ್ರಕಾರ, ಉಭಯ ನಾಯಕರು ಇಂದು ದೆಹಲಿಯಿಂದ ಚೆನ್ನೈಗೆ ಆಗಮಿಸಿ ಸಂಜೆಯೊಳಗೆ ಹಿಂತಿರುಗಲಿದ್ದಾರೆ.
 
ಕಳೆದ ತಿಂಗಳ 22 ರಂದು ನೀರ್ಜಲೀಕರಣ ಮತ್ತು ಜ್ವರದ ಬಾಧೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಜಯಾ(68) ಅವರ ಆರೋಗ್ಯದ ಬಗ್ಗೆ ಯಾವುದೇ ನಿಖರ ಮಾಹಿತಿಗಳು ಹೊರಬರುತ್ತಿಲ್ಲ. 
 
ಜಯಾ ಆರೋಗ್ಯ ವಿಚಾರಿಸಲು ರಾಜಕೀಯ ನಾಯಕರ ದಂಡೇ ಆಸ್ಪತ್ರೆಗೆ ಹರಿದು ಬರುತ್ತಿದೆ. ತಮಿಳುನಾಡು, ಕೇರಳ, ಪುದುಚೇರಿ  ರಾಜ್ಯಪಾಲರಾದ ಕ್ರಮವಾಗಿ ವಿದ್ಯಾಸಾಗರ್ ರಾವ್, ಪಿ.ಸದಾಶಿವಮ್, ಕಿರಣ್ ಬೇಡಿ, ಕೇಂದ್ರ ಸಚಿವ ಎಮ್. ವೆಂಕಯ್ಯ ನಾಯ್ಡು, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಕೇರಳ ಮತ್ತು ಪುದುಚೇರಿ ಸಿಎಂಗಳಾದ ವಿಜಯನ್ ಮತ್ತು, ವಿ. ನಾರಾಯಣಸ್ವಾಮಿ ಈಗಾಗಲೇ ಆಸ್ಪತ್ರೆಗೆ ಭೇಟಿ ನೀಡಿ ಜಯಾ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. 
 
ಇನ್ನೊಂದೆಡೆ, ತಮ್ಮ ನಾಯಕಿ ಆರೋಗ್ಯ ಸುಧಾರಿಸಲೆಂದು ಎಐಡಿಎಂಕೆ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು ಪೂಜೆ, ಯಜ್ಞ, ಹೋಮಹವನಗಳನ್ನು ಮುಂದುವರೆಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments