Publish Date: Sat, 09 Dec 2023 (11:46 IST)
Updated Date: Sat, 09 Dec 2023 (11:48 IST)
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಕೃತ್ಯಗಳು ಹೆಚ್ಚುತ್ತಿವೆ. ಮಮತಾ ಬ್ಯಾನರ್ಜಿ ಸರ್ಕಾರದಿಂದ ಪ್ರಜಾಪ್ರಭುತ್ವ ಕಗ್ಗೊಲೆಯಾಗಿದೆ. ನಮ್ಮ ರ್ಯಾಲಿಗೆ ಹೆದರಿ ಮಮತಾ ಬ್ಯಾನರ್ಜಿ ತಡೆಯಾಜ್ಞೆ ತಂದಿದ್ದಾರೆ ಎಂದು ಅಮಿತ್ ಶಾ ಕಿಡಿಕಾರಿದ್ದಾರೆ.
ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ವಾಗ್ದಾಳಿ ನಡೆಸಿದ್ದಾರೆ.
ಮಮತಾ ಬ್ಯಾನರ್ಜಿಯಿಂದ ವೋಟ್ ಬ್ಯಾಂಕ್ ರಾಜಕಾರಣ ನಡೆಯುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಲಾಗಿದೆ. ಇದ್ಯಾವುದಕ್ಕೂ ಬಿಜೆಪಿ ಕಾರ್ಯಕರ್ತರು ಹೆದರುವುದಿಲ್ಲ. ಮುಂದಿನ ದಿನಗಳಲ್ಲಿ ನಮ್ಮ ರ್ಯಾಲಿಯನ್ನು ನಡೆಸೇ ತೀರುತ್ತೇವೆ ಎಂದು ಸಿಎಂ ಮಮತಾ ಬ್ಯಾನರ್ಜಿಗೆ ಅಮಿತ್ ಶಾ ಸವಾಲೆಸಿದ್ದಾರೆ.