Webdunia - Bharat's app for daily news and videos

Install App

ರಾಜ್ಯ ಬಿಜೆಪಿ ನಾಯಕತ್ವದ ಬಗ್ಗೆ ಸ್ಪಷ್ಟ ಸಂದೇಶ ನೀಡಿದ ಅಮಿತ್ ಶಾ

Webdunia
ಶುಕ್ರವಾರ, 3 ಸೆಪ್ಟಂಬರ್ 2021 (09:41 IST)
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್ ಶಾ ಅವರು ಹೇಳುವ ಮೂಲಕ ರಾಜ್ಯ ಬಿಜೆಪಿ ನಾಯಕತ್ವದಲ್ಲಿ ಗೊಂದಲ ಇಲ್ಲವೆಂದು ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಈ ಮೂಲಕ ಯಡಿಯೂರಪ್ಪ ನಂತರವೂ ಲಿಂಗಾಯತರಿಗೆ ರಾಜ್ಯ ಬಿಜೆಪಿ ನೇತೃತ್ವ ಎನ್ನುವುದು ನಿಚ್ಚಳವಾಗಿದೆ. ದಾವಣಗೆರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅಮಿತ್ ಶಾ, ತಮ್ಮ ಭಾಷಣದುದ್ದಕ್ಕೂ ಬಿಜೆಪಿ ನಾಯಕ ಯಡಿಯೂರಪ್ಪ ಅವರನ್ನು ಹಾಡಿಹೊಗಳಿದ್ದಾರೆ. ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ವಿಕಾಸಯುಗ ಆರಂಭವಾಯಿತು. ಅವರೇ ಸ್ವಂತ ನಿರ್ಧಾರದಿಂದ ಹೊಸ ನಾಯಕತ್ವಕ್ಕೆ ಜವಾಬ್ದಾರಿ ನೀಡಿದ್ದಾರೆ ಎಂದು ಹೇಳಿದ ಅಮಿತ್ ಶಾ, ರಾಜ್ಯದಲ್ಲಿ ಎರಡು ಪವರ್ ಸೆಂಟರ್ ಇಲ್ಲ. ಬೊಮ್ಮಾಯಿ ಅವರೇ ಏಕೈಕ ಶಕ್ತಿಕೇಂದ್ರ ಎನ್ನುವುದು ಸಂದೇಶವನ್ನು ಕೂಡ ನೀಡಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಗೊಂದಲವಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ಅವರು ಸಂದೇಶ ರವಾನಿಸಿದ್ದು, ಮುಖ್ಯಮಂತ್ರಿ ಹುದ್ದೆ ಬದಲಾಗುವುದಿಲ್ಲ. ಯಡಿಯೂರಪ್ಪನವರ ಮಾರ್ಗದರ್ಶನ, ಸಲಹೆ ಪಡೆಯಲಾಗುತ್ತದೆ ಎಂಬ ಸಂದೇಶವನ್ನೂ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments