Webdunia - Bharat's app for daily news and videos

Install App

ದೇಶದ್ರೋಹಿಗಳನ್ನು ಬೆಂಬಲಿಸುತ್ತಿರುವುದಕ್ಕೆ ರಾಹುಲ್ ಗಾಂಧಿಗೆ ನಾಚಿಕೆಯಾಗ್ಬೇಕು: ಅಮಿತ್ ಶಾ

Webdunia
ಶನಿವಾರ, 5 ಮಾರ್ಚ್ 2016 (15:22 IST)
ರಾಷ್ಟ್ರದ್ರೋಹಿಗಳನ್ನು ಬೆಂಬಲಿಸುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ನಾಚಿಕೆಯಾಗಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗುಡುಗಿದ್ದಾರೆ.
 
ಬಿಜೆಪಿ ಯುವ ಮೋರ್ಚಾದ ಸಮಾವೇಶದಲ್ಲಿ ಮಾತನಾಡಿದ ಶಾ, ರಾಷ್ಟ್ರದ್ರೋಹಿ ಘೋಷಣೆಗಳನ್ನು ಕೂಗುತ್ತಿದ್ದವರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದರು.
 
ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಕೆಲ ವಿಚ್ಚಿದ್ರಕಾರಿ ಶಕ್ತಿಗಳು ದೇಶದ ವಿರುದ್ಧವೇ ಘೋಷಣೆಗಳನ್ನು ಕೂಗುತ್ತಿದ್ದು, ಅಂತಹ ವ್ಯಕ್ತಿಗಳಿಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಸಿದರು.
 
ದೇಶದಲ್ಲಿ ಕೇಂದ್ರ ಸರಕಾರದ ವಿರುದ್ಧ ಬೃಹತ್ತಾದ ಸಂಚು ನಡೆಯುತ್ತಿದೆ. ವಾಕ್‌ಸ್ವಾತಂತ್ರ್ಯದ ನೆಪದಲ್ಲಿ ಕೆಲ ವ್ಯಕ್ತಿಗಳು ದೇಶದ್ರೋಹಿ ಘೋಷಣೆಗಳನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇಂತಹ ದುಷ್ಟಶಕ್ತಿಗಳನ್ನು ದೇಶಪ್ರೇಮಿಗಳು ಎಂದು ಬಿಂಬಿಸಲಾಗುತ್ತಿದೆ ಎಂದು ಕಿಡಿಕಾರಿದರು.
 
ದೇಶವನ್ನು ಒಡೆಯುವಂತಹ ಹೇಳಿಕೆ ನೀಡಿದವರಿಗೆ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಬೆಂಬಲ ನೀಡುತ್ತಿದ್ದು, ದೇಶದ ಯುವಕರು ಮುಂಬರುವ ದಿನಗಳಲ್ಲಿ ಅವರಿಗೆ ಸೂಕ್ತ ಉತ್ತರ ನೀಡಲಿದ್ದಾರೆ. ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಜೆಎನ್‌ಯು ವಿವಾದದ ಬಗ್ಗೆ ಬಹಿರಂಗವಾಗಿ ಸ್ಪಷ್ಟೀಕರಣ ನೀಡಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಒತ್ತಾಯಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments