Publish Date: Sun, 09 Sep 2018 (09:01 IST)
Updated Date: Sun, 09 Sep 2018 (09:04 IST)
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಧಿಕಾರ ವ್ಯಾಪ್ತಿ ಮುಂಬರುವ ಜನವರಿಯಲ್ಲಿ ಕೊನೆಗೊಳ್ಳುತ್ತಿದೆ. ಹಾಗಿದ್ದರೆ ಮುಂದಿನ ಬಿಜೆಪಿ ಅಧ್ಯಕ್ಷರು ಯಾರು ಎಂಬ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ.
ಇದೇ ವರ್ಷ ಅಂತ್ಯದಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವುದರಿಂದ ಬಿಜೆಪಿಗೆ ಹೊಸದಾಗಿ ಅಧ್ಯಕ್ಷರನ್ನು ನೇಮಕ ಮಾಡಿದರೆ ಪಕ್ಷ ಸಂಘಟನೆಗೆ ತೊಂದರೆಯಾಗುತ್ತದೆ. ಜತೆಗೆ ಅಮಿತ್ ಶಾ ಅಧ್ಯಕ್ಷರಾಗಿ ಬಿಜೆಪಿಯನ್ನು ಹಲವು ರಾಜ್ಯಗಳಲ್ಲಿ ಗೆಲ್ಲಿಸಿದ ಖ್ಯಾತಿ ಹೊಂದಿದ್ದಾರೆ.
ಹೀಗಾಗಿ 2019 ರ ಲೋಕಸಭೆ ಚುನಾವಣೆಯವರೆಗೂ ಅಮಿತ್ ಶಾ ಅವರೇ ಬಿಜೆಪಿ ಅಧ್ಯಕ್ಷರಾಗಿ ಮುಂದುವರಿಯಲಿರುವುದು ಖಚಿತವಾಗಿದೆ. ಅದಾದ ಬಳಿಕ ಹೊಸ ಅಧ್ಯಕ್ಷರನ್ನು ಪಕ್ಷ ನೇಮಕ ಮಾಡುತ್ತಾ ಅಥವಾ ಅಮಿತ್ ಶಾ ಅವರೇ ಮುಂದುವರಿಯುತ್ತಾರಾ ಕಾದು ನೋಡಬೇಕಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.