ತೆಲಂಗಾಣದಲ್ಲಿರುವ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಸರಕಾರ ದೇಶದಲ್ಲಿಯೇ ಭ್ರಷ್ಟ ಸರಕಾರವಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.
ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿಗೆ ಹೆದರಿ ಅಧಿಕೃತವಾಗಿ ಹೈದ್ರಾಬಾದ್ ವಿಮೋಚನಾ ದಿನಾಚರಣೆ ಆಚರಿಸಲು ಸರಕಾರ ಹಿಂದೇಟು ಹಾಕಿದೆ. ಕೆಸಿಆರ್ ಅವರೇ ಓವೈಸಿ ನಿಮ್ಮನ್ನು ಮುಖ್ಯಮಂತ್ರಿಯಾಗಿ ಮಾಡಿಲ್ಲ. ತೆಲಂಗಾಣದ ಜನತೆ ನಿಮ್ಮನ್ನು ಮುಖ್ಯಮಂತ್ರಿ ಮಾಡಿದ್ದಾರೆ ಎನ್ನುವುದು ಮರೆಯಬೇಡಿ ಎಂದು ಟೀಕಿಸಿದ್ದಾರೆ.
ಹೈದ್ರಾಬಾದ್ ವಿಮೋಚನಾ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾ, ಕೇಂದ್ರ ಸರಕಾರ ನೀಡಿದ 90 ಸಾವಿರ ಕೋಟಿ ರೂಪಾಯಿಗಳನ್ನು ಇತರ ಪಕ್ಷಗಳ ಶಾಸಕರನ್ನು ಖರೀದಿಸಲು ಟಿಆರ್‌ಎಸ್ ವೆಚ್ಚ ಮಾಡುತ್ತಿದೆ ಎಂದು ಆರೋಪಿಸಿದರು.
ನಿಜಾಮನ ಕಪಿಮುಷ್ಟಿಯಿಂದ ಸ್ವಾತಂತ್ರ್ಯಗೊಳಿಸಿದ ಹೋರಾಟಗಾರರಿಗೆ ಗೌರವ ನೀಡುತ್ತಿಲ್ಲ. ಓಟ್‍ಬ್ಯಾಂಕ್‌ಗಾಗಿ ಒಂದು ಸಮುದಾಯವನ್ನು ಓಲೈಸುತ್ತಿದೆ. ಬಿಜೆಪಿ ಯಾರಿಗೂ ಹೆದರುವುದಿಲ್ಲ. ಮುಂಬರುವ 2019ರ ಚುನಾವಣೆಯಲ್ಲಿ ಜಯಗಳಿಸಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ವಿಮೋಚನಾ ದಿನವನ್ನು ಅಧಿಕೃತವಾಗಿ ಆಚರಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಘೋಷಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ