ದಾವಣಗೆರೆ, ದೇವನಹಳ್ಳಿಯಲ್ಲಿ ಅಮಿತ್ ಶಾ ರೋಡ್ ಶೋ

Webdunia
ಗುರುವಾರ, 20 ಏಪ್ರಿಲ್ 2023 (10:42 IST)
ನವದೆಹಲಿ : ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗಳು ಅಂತ್ಯಗೊಳ್ಳುವ ಬೆನ್ನಲ್ಲೇ ಪ್ರಚಾರದ ಕಾವು ಹೆಚ್ಚಿಸಲು ಬಿಜೆಪಿ ಹೈಕಮಾಂಡ್ ತೀರ್ಮಾನಿಸಿದೆ. ಇದರ ಭಾಗವಾಗಿ ಏಪ್ರಿಲ್ 21 ಮತ್ತು 22 ರಂದು ದಾವಣಗೆರೆ ಮತ್ತು ದೇವನಹಳ್ಳಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ನಡೆಸಲಿದ್ದಾರೆ.
 
ಈಗಾಗಲೇ ಚುನಾವಣೆ ಅಖಾಡಕ್ಕೆ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಧುಮುಕಿದ್ದು ಇದರ ಬೆನ್ನಲ್ಲೇ ಶಾ ಹಾಗೂ ಮೋದಿ ಜೋಡಿ ಕಮಾಲ್ ಮಾಡಲು ಸಿದ್ಧವಾಗಿದೆ.

ಏಪ್ರಿಲ್ 21-23 ರವರೆಗೆ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸದಲ್ಲಿರಲಿದ್ದು ಇಲ್ಲಿ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಮತ್ತು ಕೆಲವು ಪ್ರಮುಖ ಮಠಾಧೀಶರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ಹೇಳಿವೆ. ಇದೇ ವೇಳೆ ಅಮಿತ್ ಶಾ ರಾಜ್ಯ ನಾಯಕರೊಂದಿಗೆ ಸಭೆ ನಡೆಸಲಿದ್ದು ಪ್ರಚಾರದ ಕಾರ್ಯತಂತ್ರ ಹೆಣೆಯಲಿದ್ದಾರೆ.

ಅಮಿತ್ ಶಾ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅಖಾಡಕ್ಕೆ ಇಳಿಯಲಿದ್ದು ಏಪ್ರಿಲ್ 25ರ ಬಳಿಕ ಸುಮಾರು 15-20 ರೋಡ್ ಶೋ, ಸಮಾವೇಶ, ರ್ಯಾಲಿಗಳಲ್ಲಿ ಭಾಗಿಯಾಗಲಿದ್ದಾರೆ. ಚುನಾವಣೆ ಘೋಷಣೆಗೂ ಮುನ್ನ 7 ಬಾರಿ ಮೋದಿ ರಾಜ್ಯಕ್ಕೆ ಭೇಟಿ ನೀಡಿದ್ದು ಆ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ಮೋದಿ ಪ್ರಚಾರ ಮಾಡಲಿದ್ದಾರೆ. ಈ ಪ್ರಚಾರದಲ್ಲಿ ಬಂಡಾಯ ನಾಯಕರ ಕ್ಷೇತ್ರಗಳು ಪ್ರಮುಖವಾಗಿರಲಿವೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಮಾಹಿತಿ ಕೊಡಲು ಅಧಿಕಾರಿಗಳು ಅಂಜುತ್ತಿರುವುದೇಕೆ: ಮಹೇಶ್ ಟೆಂಗಿನಕಾಯಿ

ವಿದೇಶದಲ್ಲಿ ಗಾಂಧಿ ಜಪಿಸುವ ಪ್ರಧಾನಿ, ಭಾರತದಲ್ಲಿ ಅಪಚಾರ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ ನುಂಗಲು ಹವಣಿಸಿದ್ರು: ಆರ್ ಅಶೋಕ್

ದಿಡೀರನೇ ಆಸ್ಪತ್ರೆಗೆ ದಾಖಲಾಗದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್, ಆಗಿದ್ದೇನು ಗೊತ್ತಾ

ಪ್ರಧಾನಿ ನರೇಂದ್ರ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

ಮುಂದಿನ ಸುದ್ದಿ
Show comments