Select Your Language

Notifications

webdunia
webdunia
webdunia
webdunia

ತಮಿಳುನಾಡು ಸರ್ಕಾರಕ್ಕೆ ಅಮಿತ್ ಶಾ ಮನವಿ?

webdunia
ಚೆನ್ನೈ , ಸೋಮವಾರ, 14 ನವೆಂಬರ್ 2022 (09:26 IST)
ಚೆನ್ನೈ : ತಮಿಳು ಮಾಧ್ಯಮದಲ್ಲೂ ವೈದ್ಯಕೀಯ ಶಿಕ್ಷಣವನ್ನು ಪ್ರಾರಂಭಿಸಿ ಎಂದು ತಮಿಳುನಾಡು ಸರ್ಕಾರಕ್ಕೆ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿದರು.

ಚೆನ್ನೈನಲ್ಲಿ ಮಾತನಾಡಿದ ಅವರು, ತಮಿಳು ವಿಶ್ವದ ಪ್ರಾಚೀನ ಭಾಷೆಗಳಲ್ಲಿ ಒಂದಾಗಿದೆ. ತಮಿಳು ವ್ಯಾಕರಣವು ವಿಶ್ವದ ಅತ್ಯಂತ ಪ್ರಾಚೀನ ವ್ಯಾಕರಣವಾಗಿದೆ.

ಈ ಹಿನ್ನೆಲೆಯಲ್ಲಿ ತಮಿಳು ಭಾಷೆಯನ್ನು ತಮಿಳುನಾಡು ಮಾತ್ರವಲ್ಲ, ರಾಷ್ಟ್ರದಲ್ಲೇ ಪ್ರಚಾರ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ದೇಶದ ಹಲವು ರಾಜ್ಯಗಳು ವೈದ್ಯಕೀಯ ಮತ್ತು ತಾಂತ್ರಿಕ ಶಿಕ್ಷಣವನ್ನು ಪ್ರಾದೇಶಿಕ ಭಾಷೆಗಳಲ್ಲಿ ಆರಂಭಿಸಿವೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣವನ್ನು ತಮಿಳಿನಲ್ಲಿ ಆರಂಭಿಸುವಂತೆ ನಾನು ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಇದರಿಂದ ತಮಿಳು ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ವಿಷಯಗಳನ್ನು ಸುಲಭವಾಗಿ ಗ್ರಹಿಸಲು ಸಹಾಯ ಮಾಡುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ದ್ವೇಷಕ್ಕೆ ಮಗಳನ್ನೆ ಬಲಿಕೊಟ್ಟ ಪಾಪಿ ತಂದೆ!