Publish Date: Thu, 21 Oct 2021 (10:12 IST)
Updated Date: Thu, 21 Oct 2021 (10:14 IST)
ಶ್ರೀನಗರ, ಅ 21 : ಕಳೆದ ಕೆಲವು ವಾರಗಳಿಂದ ಉಗ್ರರ ಉಪಟಳ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಶೀಘ್ರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ.
ಈಗಾಗಲೇ ಶ್ರೀನಗರದ ಹಲವು ಸ್ಥಳಗಳನ್ನು ಪರಿಶೀಲನೆ ಮಾಡಲಾಗಿದೆ. ಶ್ರೀನಗರದಲ್ಲಿ ಸಂಚರಿಸುವ ವಾಹನಗಳು ಮತ್ತು ವಾಹನ ಸವಾರರ ಗುರುತಿನ ಚೀಟಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆa.
ಇತ್ತೀಚೆಗೆ ಭಯೋತ್ಪಾದಕರ ದಾಳಿಯಲ್ಲಿ ಸ್ಥಳೀಯರಲ್ಲದ ನಾಲ್ಕು ಮಂದಿ ಸೇರಿದಂತೆ 9 ನಾಗರಿಕರು ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟಿದ್ದು, ಈ ವಿಚಾರವಾಗಿ ಅಮಿತ್ ಶಾ ಚರ್ಚೆ ನಡೆಸಲಿದ್ದಾರೆ.
ಶ್ರೀನಗರಕ್ಕೆ ಅಮಿತ್ ಶಾ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಶ್ರೀನಗರಕ್ಕೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ಅಕ್ಟೋಬರ್ 23-24 ರಂದು ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಲಿದ್ದಾರೆ ಎಂದು ಹೇಳಲಾಗಿದೆ.