Select Your Language

Notifications

webdunia
webdunia
webdunia
webdunia

ಕೋವಿಡ್‌ ಅಬ್ಬರ ಮುಗಿದ ನಂತರ ಸಿಎಎ ಜಾರಿ: ಅಮಿತ್‌ ಶಾ

Amit Shah CAA COVID coronavirus ಕೋವಿಡ್‌ ಅಮಿತ್‌ ಶಾ ಸಿಎಎ
bengaluru , ಶುಕ್ರವಾರ, 6 ಮೇ 2022 (14:04 IST)
ವಿವಾದಾತ್ಮಕ ಸಿಎಎ ಕಾಯ್ದೆಯನ್ನು ಕೋವಿಡ್‌ ಮುಗಿದ ನಂತರ ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಶುಕ್ರವಾರ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಕೊರೊನಾ ಮುಗಿದ ನಂತರವೇ ನಾಗರಿಕ ಪೌರತ್ವ ಕಾಯ್ದೆ (ಸಿಎಎ) ಜಾರಿ ಮಾಡಲಾಗುವುದು ಎಂದರು.
ಪಶ್ಚಿಮ ಬಂಗಾಳದಲ್ಲಿ ಅಧಿಕಾರದಲ್ಲಿರುವ ತೃಣಮೂಲ ಕಾಂಗ್ರೆಸ್‌ ಪಕ್ಷ ಈಶಾನ್ಯ ರಾಜ್ಯಗಳಲ್ಲಿ ನಾವು ಸಿಎಎ ಜಾರಿಗೆ ತರುವುದಿಲ್ಲ ಎಂದು ಸುಳ್ಳು ಪ್ರಚಾರ ಮಾಡುತ್ತಿದೆ. ಆದರೆ ನಾವು ಅನುಷ್ಠಾನಕ್ಕೆ ತಂದೇ ತರುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು.
ಎರಡು ದಿನಗಳ ಬಂಗಾಳ ಪ್ರವಾಸ ಕೈಗೊಂಡಿರುವ ಅಮಿತ್‌ ಶಾ, ಮಮತಾ ದೀದಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಆದರೆ ಜನರಿಗೆ ತಿಳಿಯಲಿದೆ ನಾವು ಒಂದಲ್ಲ ಒಂದು ದಿನ ಜಾರಿಗೆ ಮಾಡಿದ ನಂತರ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ನೌಕರರಿಗೆ ಕಂಪ್ಯೂಟರ್ ಕಲಿಕೆ ಕಡ್ಡಾಯ!