Select Your Language

Notifications

webdunia
webdunia
webdunia
webdunia

ರಾಜ್ಯ ಬಿಜೆಪಿ ನಾಯಕರ ಜೊತೆ ದೆಹಲಿಯಲ್ಲಿ ಇಂದು ಸಭೆ ನಡೆಸಲಿರುವ ಅಮಿತ್ ಶಾ

ರಾಜ್ಯ ಬಿಜೆಪಿ ನಾಯಕರ ಜೊತೆ ದೆಹಲಿಯಲ್ಲಿ ಇಂದು ಸಭೆ ನಡೆಸಲಿರುವ ಅಮಿತ್ ಶಾ
ನವದೆಹಲಿ , ಭಾನುವಾರ, 13 ಜನವರಿ 2019 (10:42 IST)
ನವದೆಹಲಿ : ಮುಂದಿನ ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕರ್ನಾಟಕ ರಾಜ್ಯ ಬಿಜೆಪಿ ನಾಯಕರ ಜೊತೆ ರಾಷ್ಟ್ರಿಯ ಅಧ್ಯಕ್ಷ ಅಮಿತ್ ಶಾ ಇಂದು ಸಭೆ ನಡೆಸಲಿದ್ದಾರೆ.


ದೆಹಲಿ ನಡೆಯುವ ಇಂದಿನ ಸಭೆಗೆ ಹಾಜರಾಗುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್.ಯಡಿಯೂರಪ್ಪ ಅವರು ರಾಜ್ಯ ಬಿಜೆಪಿ ನಾಯಕರಿಗೆ ಸೂಚನೆ ನೀಡಿದ್ದಾರೆ.  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ರಾಜ್ಯದ ಎಲ್ಲ ಶಾಸಕರ, ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯ ಮುಖಂಡರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.


ಹಾಗೇ ಶಾಸಕರು ಮತ್ತು ಸಂಸದರೊಂದಿಗೆ ಅಮಿತ್ ಶಾ ಇಂದು ಪ್ರತ್ಯೇಕವಾಗಿ ಸಭೆ ನಡೆಸಲಿದ್ದು, ರಾಜ್ಯದ ಲೋಕಸಭಾ ಅಭ್ಯರ್ಥಿಗಳ ಕುರಿತಂತೆ ಸ್ಥಳೀಯ ನಾಯಕರ ಅಭಿಪ್ರಾಯವನ್ನು ಇಂದಿನ ಸಭೆಯಲ್ಲಿ ಸಂಗ್ರಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ವೀರಶೈವ-ಲಿಂಗಾಯತ ಸಮಾಜವನ್ನು ಒಡೆಯುವ ಕೆಲಸ ಮಾಡಿದ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ ಶಾಮನೂರು ಶಿವಶಂಕರ್