Publish Date: Wed, 25 Jan 2023 (07:09 IST)
Updated Date: Wed, 25 Jan 2023 (09:10 IST)
ಬೆಳಗಾವಿ : ಕಿತ್ತೂರು ಕರ್ನಾಟಕದಲ್ಲಿ ಬಿಜೆಪಿಗೆ ಶಕ್ತಿ ತುಂಬಲು ಬೆಳಗಾವಿಗೆ ಚುನಾವಣಾ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದಾರೆ.
ಕಿತ್ತೂರು ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಂದಿದ್ದಾಯ್ತು, ಈಗ ಅಮಿತ್ ಶಾ ಸರದಿ ಬಂದಿದ್ದು ಜ.27 ಹಾಗೂ 28ರಂದು ಎರಡು ದಿನ ಅಮಿತ್ ಶಾ ಧಾರವಾಡ, ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಜ.27ರಂದು ರಾತ್ರಿ ಹುಬ್ಬಳ್ಳಿಗೆ ಆಗಮಿಸುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಜ.28ರ ಬೆಳಗ್ಗೆ 10 ಗಂಟೆಗೆ ಕುಂದಗೋಳಗೆ ತೆರಳಲಿದ್ದು, ಕುಂದಗೋಳದಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನದಲ್ಲಿ ಭಾಗಿಯಾಗುತ್ತಾರೆ.
ಬಳಿಕ ಕೆಎಲ್ಇ ಸಂಸ್ಥೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ಧಾರವಾಡಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ವಿಜ್ಞಾನ ಕೇಂದ್ರದ ಉದ್ಘಾಟನೆ ಮಾಡ್ತಾರೆ. ನಂತರ ಮಧ್ಯಾಹ್ನ 3.45ಕ್ಕೆ ಬೆಳಗಾವಿ ಜಿಲ್ಲೆಯ ಎಂ.ಕೆ.ಹುಬ್ಬಳ್ಳಿಗೆ ಆಗಮಿಸಲಿದ್ದು ಬೆಳಗಾವಿಯಲ್ಲಿ ಸರಣಿ ಸಭೆ ನಡೆಸಲಿದ್ದಾರೆ.