ಬಿಜೆಪಿ ಭೀಷ್ಮ ಅಡ್ವಾಣಿ ದಾಖಲೆ ಮುರಿದ ಚಾಣಾಕ್ಷ ಅಮಿತ್‌ ಶಾ: ಗೃಹ ಸಚಿವರನ್ನು ಕೊಂಡಾಡಿದ ಮೋದಿ

Sampriya
ಮಂಗಳವಾರ, 5 ಆಗಸ್ಟ್ 2025 (14:26 IST)
Photo Credit X
ನವದೆಹಲಿ: ಬಿಜೆಪಿ ಭೀಷ್ಮ ಎಲ್‌.ಕೆ. ಅಡ್ವಾಣಿ ಅವರ ಬಹುಕಾಲದ ದಾಖಲೆಯೊಂದನ್ನು ಬಿಜೆಪಿ ಚಾಣಾಕ್ಷ ಅಮಿತ್‌ ಶಾ ಮುರಿದಿದ್ದಾರೆ. ಇದುವರೆಗೆ ಅತಿ ಹೆಚ್ಚು ಕಾಲ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ ದಾಖಲೆಗೆ ಶಾ ಪಾತ್ರವಾಗಿದ್ದಾರೆ. 

ಅಮಿತ್ ಶಾ ಅವರು ಭಾರತದಲ್ಲಿ ಅತಿ ಹೆಚ್ಚು ಕಾಲ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ, ಮೇ 2019ರ 30 ರಂದು ಅಧಿಕಾರ ವಹಿಸಿಕೊಂಡಾಗಿನಿಂದ 2,258 ದಿನಗಳನ್ನು ಪೂರೈಸಿದ್ದಾರೆ. 

1998ರ ಮಾರ್ಚ್ 19 ರಿಂದ 2004ರ ಮೇ 22 ರವರೆಗೆ 2,256 ದಿನಗಳ ಕಾಲ ಈ ಹುದ್ದೆಯನ್ನು ಅಲಂಕರಿಸಿದ್ದ ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಅಧಿಕಾರಾವಧಿಯನ್ನು ಅಮಿತ್ ಶಾ ಮೀರಿಸಿದ್ದಾರೆ. ಅಮಿತ್ ಶಾ ಅವರು 6 ವರ್ಷ 56 ದಿನಗಳನ್ನು ಈ ಹುದ್ದೆಯಲ್ಲಿ ಪೂರ್ಣಗೊಳಿಸಿದ್ದಾರೆ.  ಶಾ ಅವರು ಗೃಹ ಸಚಿವಾಲಯದ ಜೊತೆಗೆ ಕೇಂದ್ರ ಸಹಕಾರ ಸಚಿವರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಮೋದಿ ಶ್ಲಾಘನೆ: ದೆಹಲಿಯಲ್ಲಿ ಇಂದು ನಡೆದ ಎನ್‌ಡಿಎ ಮೈತ್ರಿಕೂಟ ಸಭೆಯಲ್ಲಿ ಅಮಿತ್ ಶಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು. ಆಪರೇಷನ್ ಸಿಂದೂರ್ ಕುರಿತ ನಿರ್ಣಯವನ್ನು ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಅಂಗೀಕರಿಸಲಾಯಿತು.  <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮೋದಿಗೆ ರಾಜ್ಯದ ಮೇಲೆ ಸಿಟ್ಟು, ಅಮವಾಸ್ಯೆ ತೇಜಸ್ವಿಯೂ ಕೇಂದ್ರದಿಂದ ಹಣ ತರಲ್ಲ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments