Select Your Language

Notifications

webdunia
webdunia
webdunia
webdunia

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ಗಗನಸಖಿಯ ಮೇಲೆ ಲೈಂಗಿಕ ದೌರ್ಜನ್ಯ

Sampriya

ಗುರುಗ್ರಾಮ್‌ , ಶನಿವಾರ, 19 ಏಪ್ರಿಲ್ 2025 (20:42 IST)
Photo Credit X
ಗುರುಗ್ರಾಮ್‌: ಇಲ್ಲಿನ ಆಸ್ಪತ್ರೆಯೊಂದರಲ್ಲಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ನಡೆದ ಅತ್ಯಚಾರ ಪ್ರಕರಣ ಸಂಬಂದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅತ್ಯಾಚಾರ ಪ್ರಕರಣ ಸಂಬಂಧ ಆಸ್ಪತ್ರೆಯ 800 ಸಿಸಿಟಿವಿ ಕ್ಯಾಮೆರಾಗಳನ್ನು ತನಿಖೆ ಒಳಪಡಿಸಲಾಯಿತು. ಗುರುಗ್ರಾಮ್‌ನ ಆಸ್ಪತ್ರೆಯೊಂದರ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ ನಡೆಸಲಾಗಿದೆ ಎನ್ನಲಾಗಿತ್ತು. ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ಬಂಧಿಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) 8 ಕ್ರ್ಯಾಕ್ ತಂಡಗಳ ನೆರವಿನಿಂದ ಬಂಧಿಸಲಾಗಿದೆ.

ಆರೋಪಿಯನ್ನು ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಬಧೌಲಿ ಗ್ರಾಮದ ನಿವಾಸಿ ದೀಪಕ್ ಎಂದು ಗುರುತಿಸಲಾಗಿದ್ದು, ಇಂದು ಗುರುಗ್ರಾಮದಿಂದ ಬಂಧಿಸಲಾಗಿದೆ. ಪರಾರಿಯಾಗಿದ್ದ 25 ವರ್ಷದ ವ್ಯಕ್ತಿ ಕಳೆದ ಐದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿರುವುದಾಗಿ ತಿಳಿದುಬಂದಿದೆ.

ರೋಗಿಯ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪದ ಕುರಿತು ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ ಪೊಲೀಸರು ಕಸ್ಟಡಿಗೆ ಪಡೆದಿರುವ ಶಂಕಿತನನ್ನು ಗುರುತಿಸಿದ್ದಾರೆ ಎಂದು ನಮಗೆ ತಿಳಿಸಲಾಗಿದೆ. ಪೊಲೀಸರು ನಮಗೆ ನೀಡಿದ ಮಾಹಿತಿಯ ಆಧಾರದ ಮೇಲೆ ನಾವು ಶಂಕಿತ ಉದ್ಯೋಗಿಯನ್ನು ಅಮಾನತುಗೊಳಿಸಿದ್ದೇವೆ" ಎಂದು ಆಸ್ಪತ್ರೆಯ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಏಪ್ರಿಲ್ 6 ರಂದು ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ವೆಂಟಿಲೇಟರ್ ಬೆಂಬಲದಲ್ಲಿರುವಾಗ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಗಗನಸಖಿಯೊಬ್ಬರು ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ