Webdunia - Bharat's app for daily news and videos

Install App

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

Sampriya
ಶನಿವಾರ, 19 ಏಪ್ರಿಲ್ 2025 (20:42 IST)
Photo Credit X
ಗುರುಗ್ರಾಮ್‌: ಇಲ್ಲಿನ ಆಸ್ಪತ್ರೆಯೊಂದರಲ್ಲಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ನಡೆದ ಅತ್ಯಚಾರ ಪ್ರಕರಣ ಸಂಬಂದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅತ್ಯಾಚಾರ ಪ್ರಕರಣ ಸಂಬಂಧ ಆಸ್ಪತ್ರೆಯ 800 ಸಿಸಿಟಿವಿ ಕ್ಯಾಮೆರಾಗಳನ್ನು ತನಿಖೆ ಒಳಪಡಿಸಲಾಯಿತು. ಗುರುಗ್ರಾಮ್‌ನ ಆಸ್ಪತ್ರೆಯೊಂದರ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ ನಡೆಸಲಾಗಿದೆ ಎನ್ನಲಾಗಿತ್ತು. ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ಬಂಧಿಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) 8 ಕ್ರ್ಯಾಕ್ ತಂಡಗಳ ನೆರವಿನಿಂದ ಬಂಧಿಸಲಾಗಿದೆ.

ಆರೋಪಿಯನ್ನು ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಬಧೌಲಿ ಗ್ರಾಮದ ನಿವಾಸಿ ದೀಪಕ್ ಎಂದು ಗುರುತಿಸಲಾಗಿದ್ದು, ಇಂದು ಗುರುಗ್ರಾಮದಿಂದ ಬಂಧಿಸಲಾಗಿದೆ. ಪರಾರಿಯಾಗಿದ್ದ 25 ವರ್ಷದ ವ್ಯಕ್ತಿ ಕಳೆದ ಐದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿರುವುದಾಗಿ ತಿಳಿದುಬಂದಿದೆ.

ರೋಗಿಯ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪದ ಕುರಿತು ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ ಪೊಲೀಸರು ಕಸ್ಟಡಿಗೆ ಪಡೆದಿರುವ ಶಂಕಿತನನ್ನು ಗುರುತಿಸಿದ್ದಾರೆ ಎಂದು ನಮಗೆ ತಿಳಿಸಲಾಗಿದೆ. ಪೊಲೀಸರು ನಮಗೆ ನೀಡಿದ ಮಾಹಿತಿಯ ಆಧಾರದ ಮೇಲೆ ನಾವು ಶಂಕಿತ ಉದ್ಯೋಗಿಯನ್ನು ಅಮಾನತುಗೊಳಿಸಿದ್ದೇವೆ" ಎಂದು ಆಸ್ಪತ್ರೆಯ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಏಪ್ರಿಲ್ 6 ರಂದು ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ವೆಂಟಿಲೇಟರ್ ಬೆಂಬಲದಲ್ಲಿರುವಾಗ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಗಗನಸಖಿಯೊಬ್ಬರು ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ಮುಂದಿನ ಸುದ್ದಿ