Webdunia - Bharat's app for daily news and videos

Install App

ಜಾತಿ ರಾಜಕಾರಣದ ವಿಷ ಹರಡಿ ಶಾಂತಿ ಕದಡಲು ಪ್ರಯತ್ನ: ಮೋದಿ ಹೀಗೆ ಹೇಳಿದ್ದು ಯಾರಿಗೆ

Sampriya
ಶನಿವಾರ, 4 ಜನವರಿ 2025 (14:46 IST)
ನವದೆಹಲಿ: ಜಾತಿ ರಾಜಕಾರಣದ ವಿಷವನ್ನು ಹರಡುವ ಮೂಲಕ ಕೆಲವರು ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಇಂದು ದೆಹಲಿಯಲ್ಲಿ ಗ್ರಾಮೀಣ ಭಾರತ ಮಹೋತ್ಸವವನ್ನು ಉದ್ಘಾಟಿಸಿದ ಅವರು, ಜಾತಿ ರಾಜಕಾರಣ ಹೆಸರಿನಲ್ಲಿ ಕೆಲವರು ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು. ಆದರೆ ಯಾರ ಹೆಸರನ್ನು ಉಲ್ಲೇಖಿಸಿಲ್ಲ. ಆದರೆ, ಪರೋಕ್ಷವಾಗಿ ಕಾಂಗ್ರೆಸ್‌ ವಿರುದ್ಧವೇ ಅವರು ವಾಗ್ದಾಳಿ ನಡೆಸಿದರು.

 2047 ರ ವೇಳೆಗೆ ವಿಕಸಿತ ಭಾರತ ಕನಸನ್ನು ಮುಂದಕ್ಕೆ ತೆಗೆದುಕೊಂಡು ಹೋಗುವಲ್ಲಿ ಗ್ರಾಮಗಳು ಪ್ರಮುಖ ಪಾತ್ರ ವಹಿಸಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸ್ವಾತಂತ್ರ್ಯ ಸಿಕ್ಕಿದ ದಶಕಗಳ ನಂತರವೂ ಗ್ರಾಮೀಣ ಭಾರತವನ್ನು ನಿರ್ಲಕ್ಷಿಸಿಕೊಂಡು ಬರಲಾಗುತ್ತಿತ್ತು. ಮೂಲಭೂತ ಅವಶ್ಯಕತೆಗಳಿಂದ ವಂಚಿತವಾಗಿರುವ ಗ್ರಾಮಗಳನ್ನು ಬಿಟ್ಟುಹೋದ ಹಿಂದಿನ ಸರ್ಕಾರಕ್ಕಿಂತ ಭಿನ್ನವಾಗಿ ಇಂದಿನ ನಮ್ಮ ಸರ್ಕಾರವು ಈಗ ಹಳ್ಳಿಗಳನ್ನು ಸಬಲೀಕರಣಗೊಳಿಸಲು ಮತ್ತು ಆರಂಭದಲ್ಲಿ ಕಡೆಗಣಿಸಲ್ಪಟ್ಟವರ ಅಗತ್ಯಗಳನ್ನು ಪರಿಹರಿಸಲು ಗಮನಹರಿಸಿದೆ ಎಂದು ಒತ್ತಿ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪ್ರಧಾನ ಮಂತ್ರಿ ಜನ್ ಧನ್ ಯೋಜನೆ, ಪಿಎಂ ಮುದ್ರಾ ಮತ್ತು ಪಿಎಂ ಸ್ವನಿಧಿ ಸೇರಿದಂತೆ 16 ಸರ್ಕಾರಿ ಯೋಜನೆಗಳಿಗೆ ಬ್ಯಾಂಕ್‌ಗಳು ಸ್ಯಾಚುರೇಶನ್ ಅಭಿಯಾನವನ್ನು ಕೈಗೊಂಡಿವೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments