ಟಿಕೆಟ್ ಕೈ ತಪ್ಪುವ ಭೀತಿ: ಸೈಲೆಂಟಾದ ಅನಂತಕುಮಾರ್ ಹೆಗಡೆ

Krishnaveni K
ಶುಕ್ರವಾರ, 22 ಮಾರ್ಚ್ 2024 (16:28 IST)
Photo Courtesy: Twitter
ಬೆಂಗಳೂರು: ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದೆ ಎಂದಾಗ ವಿವಾದಾತ್ಮಕ ಹೇಳಿಕೆಗಳಿಂದ ಮುನ್ನಲೆಗೆ ಬಂದಿದ್ದ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಈಗ ಮತ್ತೆ ಸೈಲಂಟಾಗಿದ್ದಾರೆ.
 

ಇತ್ತೀಚೆಗೆ ಕೆಲವು ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಾಗಿದ್ದ ಅನಂತಕುಮಾರ್ ಹೆಗಡೆ ಹೈಕಮಾಂಡ್ ಕೋಪಕ್ಕೂ ಗುರಿಯಾಗಿದ್ದರು. ಅದರಲ್ಲೂ ಅವರ ಸಂವಿಧಾನ ಬದಲಾಯಿಸುವ ಹೇಳಿಕೆಗೆ ಬಿಜೆಪಿ ಹೈಕಮಾಂಡ್ ಉತ್ತರ ಕೇಳಿ ನೋಟಿಸ್ ಜಾರಿ ಮಾಡಿತ್ತು.

ಇದರ ನಡುವೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು, ಆಗಲೂ ಉತ್ತರ ಕನ್ನಡಕ್ಕೆ ಅಭ್ಯರ್ಥಿ ಘೋಷಣೆ ಮಾಡಿರಲಿಲ್ಲ. ಅಲ್ಲದೆ, ಕೆಲವೊಂದು ಮೂಲಗಳ ಪ್ರಕಾರ ವಿವಾದಗಳಿಂದ ಪಕ್ಷಕ್ಕೆ ಮುಜುಗರ ತರುತ್ತಿರುವ ಅನಂತಕುಮಾರ್ ಹೆಗಡೆಗೆ ಈ ಬಾರಿ ಟಿಕೆಟ್ ಸಿಗುವುದು ಅನುಮಾನ ಎನ್ನಲಾಗುತ್ತಿದೆ.

ಈ ಎಲ್ಲಾ ಬೆಳವಣಿಗೆ ನಡುವೆ ಸೈಲೆಂಟ್ ಆಗಿರುವ ಅನಂತಕುಮಾರ್ ಹೆಗಡೆ ಮತ್ತೆ ಮನೆಗೆ ಮರಳಿದ್ದಾರೆ. ಇದೀಗ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿಲ್ಲ. ಜೊತೆಗೆ ಯಾರ ಸಂಪರ್ಕಕ್ಕೂ ಸಿಗದೇ ಮತ್ತೆ ಅಜ್ಞಾತವಾಸ ಮಾಡಿದ್ದಾರೆ.  ಈ ನಡುವೆ ತಮ್ಮ ತವರಿನಲ್ಲಿ ಸರಣಿ ಸಭೆ ನಡೆಸಿದ್ದ ಅನಂತಕುಮಾರ್ ಹೆಗಡೆ ಟಿಕೆಟ್ ಕೈತಪ್ಪುವ ಭೀತಿ ಕಾಡುತ್ತಿದ್ದಂತೇ ಸೈಲೆಂಟ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಡಿಕೆ ಶಿವಕುಮಾರ್ ಬೆಂಬಲಿಗರನ್ನು ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಮುಂದಿನ ಸುದ್ದಿ
Show comments