ಹೈದರಾಬಾದ್ : ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್. ಶರ್ಮಿಳಾ ಅವರನ್ನು ವಾರಂಗಲ್ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ತೆಲಂಗಾಣದಲ್ಲಿ ಶರ್ಮಿಳಾ ಅವರು ವೈಎಸ್ಆರ್ ತೆಲಂಗಾಣ ಪಕ್ಷವನ್ನು ಸಂಘಟಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪಾದಾಯಾತ್ರೆಯನ್ನು ಹಮ್ಮಿಕೊಂಡಿದ್ದರು.
ಅಷ್ಟೇ ಅಲ್ಲದೇ ಈವರೆಗೆ ಸುಮಾರು 3,500 ಕಿ.ಮೀವರೆಗೆ ಪಾದಯಾತ್ರೆ ನಡೆಸಿದ್ದರು. ನಿನ್ನೆ ನರಸಂಪೇಟೆಯಲ್ಲಿದ್ದ ಅವರು ಸ್ಥಳೀಯ ಟಿಆರ್ಎಸ್ ಶಾಸಕ ಪೆದ್ದಿ ಸುದರ್ಶನ್ ರೆಡ್ಡಿ ಅವರನ್ನು ಟೀಕಿಸಿದರು.
ಇದರಿಂದಾಗಿ ಕೋಪಗೊಂಡ ಟಿಆರ್ಎಸ್ ಕಾರ್ಯಕರ್ತರು ಶರ್ಮಿಳಾ ಅವರ ವಾಹನದ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.