Select Your Language

Notifications

webdunia
webdunia
webdunia
webdunia

ನಿರ್ದೇಶಕ ಸ್ಥಾನಕ್ಕೆ ಅನಿಲ್ ಅಂಬಾನಿ ರಾಜೀನಾಮೆ?

ನಿರ್ದೇಶಕ ಸ್ಥಾನಕ್ಕೆ ಅನಿಲ್ ಅಂಬಾನಿ ರಾಜೀನಾಮೆ?
ನವದೆಹಲಿ , ಶನಿವಾರ, 26 ಮಾರ್ಚ್ 2022 (12:02 IST)
ನವದೆಹಲಿ : ರಿಲಯನ್ಸ್ ಪವರ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್ ನಿರ್ದೇಶಕ ಸ್ಥಾನಕ್ಕೆ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರು ರಾಜೀನಾಮೆ ನೀಡಿದ್ದಾರೆ.

ಸೆಬಿ [ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ] ಮಧ್ಯಂತರ ಆದೇಶವನ್ನು ಪಾಲಿಸುವ ಸಲುವಾಗಿ ಕಾರ್ಯನಿರ್ವಹಕೇತರ ನಿರ್ದೇಶಕ ಅನಿಲ್ ಡಿ ಅಂಬಾನಿ ಅವರು ರಿಲಯನ್ಸ್ ಪವರ್ ಸಂಸ್ಥೆಯ ಬೋರ್ಡ್ನಿಂದ ಹೊರ ಬರುತ್ತಿದ್ದಾರೆ ಎಂದು ರಿಲಯನ್ಸ್ ಪವರ್ ತನ್ನ ಬಿಎಸ್ಇ ಫೈಲಿಂಗ್ನಲ್ಲಿ ತಿಳಿಸಿದೆ.

ಫೆಬ್ರವರಿಯಲ್ಲಿ ಸೆಬಿ ರಿಲಯನ್ಸ್ ಹೋಮ್ ಫೈನಾನ್ಸ್ ಲಿಮಿಟೆಡ್, ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಮತ್ತು ಇತರ ಮೂವರನ್ನು ಅವ್ಯವಹಾರದ ಆರೋಪದ ಮೇಲೆ ಸ್ಟಾಕ್ ಎಕ್ಸ್ಚೆಂಜ್ ಮಾರುಕಟ್ಟೆಯಿಂದ ನಿರ್ಬಂಧಿಸಿತು.

ಅನಿಲ್ ಅಂಬಾನಿ ಮತ್ತು ಮೂವರನ್ನು ಸೆಬಿಯಲ್ಲಿ ನೋಂದಾಯಿತ ಯಾವುದೇ ಮಧ್ಯವರ್ತಿ, ಯಾವುದೇ ಪಟ್ಟಿ ಮಾಡಲಾದ ಸಾರ್ವಜನಿಕ ಕಂಪನಿ ಅಥವಾ ಯಾವುದೇ ಸಾರ್ವಜನಿಕ ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕರು/ಪ್ರವರ್ತಕರಾಗಿ ಮುಂದುವರಿಯಬಾರದು ಎಂದು ಸೂಚಿಸಿದೆ.

ಇದೀಗ ಶುಕ್ರವಾರ ನಡೆಸಿದ ಸಾಮಾನ್ಯ ಸಭೆಯಲ್ಲಿ ಸದಸ್ಯರ ಅನುಮೋದನೆಯೊಂದಿಗೆ ರಿಲಯನ್ಸ್ ಪವರ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್ ಮಂಡಳಿಗಳಲ್ಲಿ ಐದು ವರ್ಷಗಳ ಅವಧಿಗೆ ಹೆಚ್ಚುವರಿ ನಿರ್ದೇಶಕರಾಗಿ ರಾಹುಲ್ ಸರಿನ್ ಅವರನ್ನು ನೇಮಿಸಲಾಗಿದೆ ಎಂದು ಎರಡು ರಿಲಯನ್ಸ್ ಗ್ರೂಪ್ ಕಂಪನಿಗಳು ತಿಳಿಸಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಕೆಲಸದಿಂದ ತೆಗೆದ ಕೋಪಕ್ಕೆ ಎಚ್ ಆರ್ ಕೊಲೆಗೆ ಯತ್ನ