Webdunia - Bharat's app for daily news and videos

Install App

ದೆಹಲಿ 20ನೇ ಉಪರಾಜ್ಯಪಾಲರಾದ ಅನಿಲ್ ಬೈಜಿಲ್

Webdunia
ಶನಿವಾರ, 31 ಡಿಸೆಂಬರ್ 2016 (12:37 IST)
ನವದೆಹಲಿಯ 20ನೇ ಉಪರಾಜ್ಯಪಾಲರಾಗಿ ಅನಿಲ್ ಬೈಜಿಲ್ (20) ಇಂದು ಅಧಿಕಾರ ಸ್ವೀಕರಿಸಿದ್ದಾರೆ.
 

 
ನವದೆಹಲಿಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಿ. ರೋಹಿಣಿ ಬೈಜಲ್ ಅವರಿಗೆ ಪ್ರಮಾಣವಚನ ಬೋಧಿಸಿದರು.  
 
ದೆಹಲಿ ಮುಖ್ಯಮಂತ್ರಿ, ಆಪ್ ನಾಯಕ ಅರವಿಂದ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವು ಗಣ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. 
 
ಪ್ರಮಾಣವಚನ ಸ್ವೀಕರಿಸಿ ಮಾತನಾಡಿದ ಬೈಜಲ್ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಪ್ರಧಾನಿ ಮೋದಿ ಅವರಿಗೆ ಕೃತಜ್ಞತ ಸಲ್ಲಿಸಿ, ನಾವು ಚುನಾಯಿತ ಸರ್ಕಾರದ ಜತೆ  ಜತೆಯಾಗಿ ಕೆಲಸ ಮಾಡುತ್ತೇವೆ ಎಂಬ ನಂಬಿಕೆ ಇದೆ. ನಾವು ಕಾನೂನು ಮತ್ತು ಸುವ್ಯವಸ್ಥೆ. ಮಹಿಳಾ ರಕ್ಷಣೆ , ಮಾಲಿನ್ಯ, ಮೂಲಭೂತ ಸೌಲಭ್ಯ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಇವೆಲ್ಲ ಸಮಸ್ಯೆಗಳ ನಿವಾರಣೆಯತ್ತ ನಾವು ಕೆಲಸ ಮಾಡೋಣ ಎಂದರು. 
 
1969 ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಬೈಜಲ್ 2006 ರಲ್ಲಿ ನಿವೃತ್ತಿ ಹೊಂದಿದ್ದರು. ಅಟಲ್‌ ಬಿಹಾರಿ ವಾಜಪೇಯಿ ಅವಧಿಯಲ್ಲಿ ಬೈಜಾಲ್‌ ಗೃಹ ಕಾರ್ಯದರ್ಶಿಯಾಗಿದ್ದ ಅವರು, ಸದ್ಯ ದೆಹಲಿಯ ಚಿಂತಕರ ಚಾವಡಿ ವಿವೇಕಾನಂದ ಇಂಟರ್ನ್ಯಾಷನಲ್ ಫೌಂಡೇಶನ್ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿದ್ದರು. 
 
1999 ರಲ್ಲಿ ಉಗ್ರರು ಕಂದಹಾರ್‌ನಲ್ಲಿ ಏರ್‌ ಇಂಡಿಯಾ  ವಿಮಾನ ಅಪಹರಣ ಮಾಡಿದ ವೇಳೆ ಏರ್‌ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. 
 
ಕೇಜ್ರಿವಾಲ್ ಅವರೊಂದಿಗಿನ ಜಟಾಪಟಿಯಿಂದಲೇ ಸದಾ ಸುದ್ದಿಯಾಗುತ್ತಿದ್ದ  ನಜೀಬ್ ಜಂಗ್ ಅವರು ಡಿ.22 ರಂದು ದೆಹಲಿ ಲೆಫ್ಟಿನೆಂಟ್ ಗೌರ್ನರ್ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ರಾಷ್ಟ್ರಪತಿಗಳು ಅನಿಲ್ ಬೈಜಲ್ ಅವರ ನೇಮಕಕ್ಕೆ ಒಪ್ಪಿಗೆ ನೀಡಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments